ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಏ.27 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 : ಸಕಲ ಸಿದ್ದತೆಗೆ ಸೂಚನೆ

Share Below Link

ಶಿವಮೊಗ್ಗ : ಜಿಯಲ್ಲಿ ಏಪ್ರಿಲ್ ೨೯ ರಿಂದ ಮೇ ೧೬ ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-೨ ನಡೆ ಯಲಿದೆ. ಪರೀಕ್ಷೆಗಳು ಶಾಂತಿಯುತ ವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಬಿ.ಕೃಷ್ಣಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಡಳಿತ ಕಚೇರಿ ಸಭಾಂಗಣ ದಲ್ಲಿ ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-೨ ಕುರಿತು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಜಿಯ ಶಿವಮೊಗ್ಗದ -೨ ಮತ್ತು ಭದ್ರಾವತಿ, ತೀರ್ಥಹಳ್ಳಿ, ಸಾಗರ, ಹೊಸನಗರ, ಶಿಕಾರಿಪುರ, ಸೊರಬ ತಾಲ್ಲೂಕುಗಳಲ್ಲಿನ ೧ ಪರೀಕ್ಷಾ ಕೇಂದ್ರ ಸೇರಿ ಒಟ್ಟು ೮ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ೩೫೩೧ ವಿದ್ಯಾರ್ಥಿ ಗಳು ಪರೀಕ್ಷೆ ಬರೆಯಲಿzರೆ.
ಪರೀಕ್ಷೆಗಳು ಬೆಳಗ್ಗೆ ೧೦.೧೫ ರಿಂದ ಮಧ್ಯಾಹ್ನ ೧.೩೦ ರವರೆಗೆ ಹಾಗೂ ದಿನಾಂಕ ೧೬.೦೫.೨೦೨೪ ರಂದು ಬೆಳಗ್ಗೆ ೧೦.೧೫ ರಿಂದ ಮಧ್ಯಾಹ್ನ ೧.೩೦ ರವರೆಗೆ ಮತ್ತು ಮಧ್ಯಾಹ್ನ ೨.೧೫ ರಿಂದ ಸಂಜೆ ೪.೩೦ ರವರೆಗೆ ನಡೆಯಲಿದೆ.
ಪ್ರಶ್ನೆ ಪತ್ರಿಕೆ ಸಾಗಾಟ ಮಾಡಲು ತ್ರಿಸದಸ್ಯ ಸಮಿತಿ ನೇಮಿಸಲಾಗಿದೆ, ಮುಖ್ಯ ಅಧೀಕ್ಷಕರು ಹಾಗೂ ಉತ್ತರ ಪತ್ರಿಕೆ ಪಾಲಕರ ನೇಮಕವಾಗಿದೆ. ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಸಹ ಮುಖ್ಯ ಅಧೀಕ್ಷಕರು ಮತ್ತು ಜಗೃತ ದಳದ ಸದಸ್ಯರನ್ನು ನೇಮಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ೨೦೦ ಮೀ ವ್ಯಾಪ್ತಿಯಲ್ಲಿ ೧೪೪ ಸೆಕ್ಷ ನ್ ಜರಿಗೊಳಿಸಿ ಆದೇಶಿಸಲಾಗಿದೆ.
ಪೊಲೀಸ್ ಇಲಾಖೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ಒದಗಿಸಲಾಗುವು ದು. ಪರೀಕ್ಷಾ ಕೇಂದ್ರಗಳ ಅಧೀಕ್ಷಕರಿಗೆ ಈಗಾಗಲೇ ತರಬೇತಿ ನೀಡ ಲಾಗಿದ್ದು , ಅವರು ತಮ್ಮ ಕೇಂದ್ರ ದಲ್ಲಿ ಕರ್ತವ್ಯ ನಿರ್ವಹಿಸುವ ಪರೀಕ್ಷಾ ಸಿಬ್ಬಂದಿಗೆ ತರಬೇತಿ ನೀಡುವಂತೆ ತಿಳಿಸಿದರು.
ಪರೀಕ್ಷೆಯು ದ್ವಿತೀಯ ಪಿಯುಸಿ ಪರೀಕ್ಷೆ ನಡೆದ ಮಾದರಿ ಯ ನಡೆಯಲಿದೆ. ಆದರೆ ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಮೆರಾ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ರ್ಥಿಗಳಿಗೆ ಕುಡಿಯುವ ನೀರು, ಸೂಕ್ತ ಆಸನಗಳ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿ ದರು.ಪರೀಕ್ಷೆಗೆ ನಿಯೋಜನೆ ಗೊಂಡ ಅಧಿಕಾರಿಗಳು ಅನುಸರಿಸ ಬೇಕಾದ ಮಾರ್ಗಸೂಚಿಗಳ ಬಗ್ಗೆ ತಿಳಿಸಿದ ಅವರು ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಪರೀಕ್ಷೆಯನ್ನು ಯಶಸ್ವಿಗೊಳಿಸ ಬೇಕೆಂದು ತಿಳಿಸಿದರು.
ಸಭೆಯಲ್ಲಿ ಜಿ ಖಜನಾಧಿಕಾರಿ ಸಾವಿತ್ರಿ, ಪ್ರಭಾರ ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ, ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಹಾಜರಿದ್ದರು.