ಕ್ಷೇತ್ರದ ಅಭಿವೃದ್ಧಿ: ಬಹುಪಾಲು ಯಶಸ್ವಿಯಾಗಿದ್ದೇನೆ : ಬಿವೈಆರ್
ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸಂಕಲ್ಪ ಹೊಂದಿ ಅದರಲ್ಲಿ ಬಹುಪಾಲು ಯಶಸ್ವಿ ಯಾಗಿzನೆ ಎಂದು ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಪತ್ರಿಕಾ ಸಂವಾದದಲ್ಲಿ ನುಡಿದರು.
ಸಂಸದನಾಗಿ ನಾನು ನಾಲ್ಕನೇ ಬಾರಿ ಆಯ್ಕೆಯಾಗಿzನೆ. ಇದಕ್ಕೆ ಎಲ್ಲರ ಸಹಕಾರವಿದೆ. ಪತ್ರಕರ್ತರ ಮಾರ್ಗದರ್ಶ ನವೂ ಇದೆ. ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಮತ್ತು ಕೇಂದ್ರದ ಹಲವು ಯೋಜನೆಗಳ ಅಡಿಯಲ್ಲಿ ಬೈಂದೂರು ಸೇರಿದಂತೆ ಇಡೀ ಲೋಕಸಭಾ ಕ್ಷೇತ್ರದ ಅಭಿವೃದ್ದಿಗೆ ಪಣತೊಟ್ಟಿzನೆ. ಸಾಕಷ್ಟು ಅಭಿವೃದ್ಧಿ ಕಾರ್ಯವೂ ನನ್ನ ಅವಧಿಯಲ್ಲಿ ಆಗಿದೆ. ಆಗಬೇಕಾದದ್ದೂ ಇದೆ. ಎಲ್ಲರ ಸಹಕಾರದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ಕಂಕಣಬದ್ಧನಾಗಿzನೆ ಎಂದರು.
ಶಿವಮೊಗ್ಗಕ್ಕೆ ವಂದೇ ಭಾರತ್ ರೈಲನ್ನು ತರುವ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ನಿರೀಕ್ಷೆ ಯಿದೆ. ಆದರೆ, ಈ ರೈಲು ಆರಂಭ ವಾಗಲು ಕೋಟೆಗಂಗೂರಿನ ರೈಲ್ವೆ ಟರ್ಮಿನಲ್ ಕಾಮಗಾರಿ ಪೂರ್ಣ ಗೊಳ್ಳುವುದು ಅತ್ಯಗತ್ಯವಾಗಿದೆ. ವಂದೇ ಭಾರತ್ ರೈಲಿಗೆ ಅಗತ್ಯವಿರುವ ಶುಚಿಗೊಳಿಸುವಿಕೆ, ನಿರ್ವಹಣೆ ಮತ್ತು ಪ್ಲಾಟ್ ಫಾರ್ಮ್ ಸೌಲಭ್ಯಗಳು ಕೋಟೆಗಂಗೂರು ಟರ್ಮಿನಲ್ ನಲ್ಲಿ ಲಭ್ಯವಿರಲಿವೆ. ಅಲ್ಲಿಯವರೆಗೆ ತಾಂತ್ರಿಕ ಕಾರಣಗಳಿಂದಾಗಿ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದು ಸ್ವಲ್ಪ ವಿಳಂಬವಾಗಬಹುದು ಎಂದರು.
ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ಹೊಸ ರೈಲ್ವೆ ಟರ್ಮಿನಲ್ ಶಿವಮೊಗ್ಗ ನಗರಕ್ಕೆ ಪರ್ಯಾಯ ಕೇಂದ್ರ ವಾಗಲಿದೆ. ಈ ಟರ್ಮಿನಲ್ ಉದ್ಘಾಟನೆಯಾದ ನಂತರ ಶಿವಮೊಗ್ಗದಿಂದ ಬೆಂಗಳೂರು ಸೇರಿದಂತೆ ಇತರ ಪ್ರಮುಖ ನಗರಗಳಿಗೆ ಹೆಚ್ಚಿನ ರೈಲುಗಳನ್ನು ಆರಂಭಿಸಲು ಮತ್ತು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಲು ಹಾದಿ ಸುಗಮವಾಗಲಿದೆ ಎಂದರು.
ಶಿವಮೊಗ್ಗ ನಗರದ ಗುಂಡಪ್ಪ ಶೆಡ್, ವಿದ್ಯಾನಗರದ ಅಂಡರ್ ಪಾಸ್ ಕಾಮಗಾರಿಗಳು ಶೀಘ್ರ ಆರಂಭವಾಗಲಿವೆ. ಅಲ್ಲದೆ, ಫ್ರೀಡಂ ಪಾರ್ಕ್ ಬಳಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಸಿ.ಆರ್.ಎಫ್. ಅನುದಾನದಡಿ ಹೊಸ ಮೇಲ್ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದಕ್ಕೆ ಬಜೆಟ್‌ನಲ್ಲಿ ಒಪ್ಪಿಗೆ ದೊರೆತಿದೆ ಎಂದು ವಿವರಿಸಿದರು.
ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಗೆ ಬೀಗ ಹಾಕುವುದನ್ನು ನಾನು ತಪ್ಪಿಸಿzನೆ. ಅಲ್ಲಿ ಇನ್ನೂ ಕಾರ್ಮಿಕರು ಕೆಲಸ ನಿರ್ವಹಿಸುತ್ತಿzರೆ. ಅದಕ್ಕೆ ಕೇಂದ್ರ ಸರ್ಕಾರದ ಅನುದಾನದಿಂದ ಅಥವಾ ಖಾಸಗಿ ಸಹಭಾಗಿತ್ವದಲ್ಲಿ ಕಾರ್ಖಾನೆಯನ್ನು ಪುನರುಜ್ಜೀವನ ಗೊಳಿಸಲು ನಿರ್ಧರಿಸಲಾಗಿದೆ. ಹಾಗೆಯೇ ಜಿಯ ಎ ಕೋರ್ಟ್‌ಗಳಲ್ಲಿ ಪೀಠೋಪಕರಣಕ್ಕಾಗಿ ತಲಾ ೨೫ ಲಕ್ಷ ರೂ. ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿzನೆ. ಬಹಳ ದಿನಗಳಿಂದ ನಿರೀಕ್ಷೆಯಲ್ಲಿರುವ ಎಫ್‌ಎಂ ಕೇಂದ್ರ ಶೀಘ್ರದಲ್ಲಿಯೇ ಆರಂಭ ಗೊಳ್ಳಲಿದೆ ಎಂದರು.

