ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಹಿರಿಯ ಪತ್ರಕರ್ತ ಅರ್ಜುನ್ ದೇವ ನಿಧನ…

Share Below Link

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಎನ್ .ಅರ್ಜುನ್ ದೇವ(೮೮) ಅವರು ಇಂದು ನಿಧನರಾದರು.
ಕೋಲಾರ ಜಿಯ ವೇಮಗಲ್ ಮೂಲದವರಾದ ಅರ್ಜುನ್ ದೇವ ಅವರು ಪತ್ನಿ, ಈರ್ವ ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿzರೆ.
ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ತಾಯಿನಾಡು ಪತ್ರಿಕೆ ಗಳಲ್ಲಿ ಸೇವೆ ಸಲ್ಲಿಸಿದ್ದ ಅವರು, ವಿಧಾನಸೌಧದ ವರದಿಗಾರಿಕೆಗೆ ಹೊಸ ಅರ್ಥ ಕಲ್ಪಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರಜಾವಾಣಿ ಪತ್ರಿಕೆಯಿಂದ ನಿವೃತ್ತ ರಾದ ನಂತರ ಭಾರತೀಯ ವಿದ್ಯಾ ಭವನದಲ್ಲಿ ಪತ್ರಿಕೋದ್ಯಮ ಅಧ್ಯಾ ಪಕರಾಗಿಯೂ ಸೇವೆ ಸಲ್ಲಿಸಿದ್ದರು.
ಇವರಿಗೆ ೧೯೮೪ರಲ್ಲಿ ರಾಜ್ಯೋ ತ್ಸವ ಪ್ರಶಸ್ತಿ, ಪತ್ರಿಕಾ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಪತ್ರಕರ್ತರ ಸಂಘದ ಅತ್ಯುತ್ತಮ ತನಿಖಾ ವರದಿಗಾಗಿ ನೀಡುವ ಚಿನ್ನದ ಪದಕ ಸೇರಿದಂತೆ ಗಣ್ಯ ಪತ್ರಕರ್ತರಿಗೆ ನೀಡುವ ಹಲವು ಪ್ರಶಸ್ತಿಗಳು ಕೂಡ ಇವರಿಗೆ ಸಂದಿವೆ.
ಸಂತಾಪ: ಪತ್ರಕರ್ತ ಅರ್ಜುನ್ ದೇವ ಅವರ ನಿಧನಕ್ಕೆ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಬಿ.ಜಿ. ವಿಜಯ್, ರಾಜ್ಯ ಘಟಕದ ಅಧ್ಯಕ್ಷ ರಮೇಶ್, ಪ್ರಧಾನ ಕಾರ್ಯದರ್ಶಿ ರಾಕೇಶ್ ಡಿಸೋಜ ಸೇರಿದಂತೆ ವಿವಿಧ ಪತ್ರಿಕಾ ಸಂಘಟನೆಗಳ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.