ಜಿಲ್ಲಾ ಸುದ್ದಿತಾಜಾ ಸುದ್ದಿ

ಸೆ.೫: ಶ್ರೀ ಬಸವೇಶ್ವರ ಸೊಸೈಟಿಯ ನೂತನ ಕಛೇರಿ ಕಟ್ಟಡ ಉದ್ಘಾಟನೆ

Share Below Link

ಶಿವಮೊಗ್ಗ: ಶ್ರೀ ಬಸವೇಶ್ವರ ಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘ ನಿ. ನೂತನ ಕಚೇರಿ ಕಟ್ಟಡದ ಉದ್ಘಾಟನೆ ಸೆ. ೫ರಂದು ಗುರುವಾರ ಬೆಳಗ್ಗೆ ೧೧ ಗಂಟೆಗೆ ವಿನೋಬನಗರ ಕಲ್ಲಹಳ್ಳಿ ಹುಡ್ಕೋ ಕಾಲೋನಿಯ ತಿಮ್ಮಕ್ಕ ಲೇಔಟ್‌ನ ಮೂರನೇ ಕ್ರಾಸ್‌ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ.ಎಸ್. ತಾರಾನಾಥ್ ಅವರು ಸುದ್ದಿಗೋಷ್ಟಿಯಲ್ಲಿ ವಿವರಿಸಿದರು.


ಈ ಪತ್ತಿನ ಸಹಕಾರ ಸಂಘಕ್ಕೆ ೯೯ ವರ್ಷ ತುಂಬಿದ್ದು, ೩೮೦೦ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದ್ದು, ೧೨ ಕೋಟಿ ರೂ. ಠೇವಣಿ ಇದೆ. ೨೦ ಕೋಟಿ ವ್ಯವಹಾರ ನಡೆಸಲಾಗಿದೆ. ೭ ಕೋಟಿ ರೂ. ಸಾಲ ನೀಡಿದ್ದೇವೆ. ಸಂಸ್ಥೆಯ ಅಭಿವೃದ್ಧಿಗೆ ಹಲವಾರು ಮಹನೀ ಯರು ಸಹಕರಿಸಿದ್ದಾರೆ. ಇದೀಗ ಸಂಸ್ಥೆಯ ನೂತನ ಕಟ್ಟಡ ನಿರ್ಮಿಸಲಾ ಗಿದ್ದು, ಬಾಳೆಹೊನ್ನೂರು ರಂಭಾಪುರಿ ಪೀಠದ ಶ್ರೀ ಡಾ. ವೀರಸೋಮೇಶ್ವರ ರಾಜದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದರಲ್ಲದೇ, ಕಾರ್ಯಕ್ರಮದ ನೇತೃತ್ವವನ್ನು ಎಡೆಯೂರು ಕ್ಷೇತ್ರದ ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ಮಳಲಿ ಮಠದ ಶ್ರೀ ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಬಿಳಕಿ ಶಾಖಾ ಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ ಎಂದರು.
ನೂತನ ಸಭಾಭವನವನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಉದ್ಘಾಟಿಸಲಿದ್ದು, ನೂತನ ಕಚೇರಿ ಕಟ್ಟಡವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಲಿದ್ದಾರೆ. ಜಿ.ಸಿ. ಮಹಾಲಿಂಗಪ್ಪ ಪ್ರಸಾದ ಭವನ ವನ್ನು, ಶಾಸಕ ಎಸ್.ಎನ್. ಚನ್ನಬಸಪ್ಪ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಕೆ.ಎಸ್. ತಾರಾನಾಥ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ, ಡಿ.ಎಸ್. ಅರುಣ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಆರ್.ಎಂ. ಮಂಜುನಾಥಗೌಡ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಸ್. ರುದ್ರೇಗೌಡ, ಆಯನೂರು ಮಂಜುನಾಥ್, ಸೂಡಾ ಅಧ್ಯಕ್ಷ ಹೆಚ್. ಎಸ್. ಸುಂದರೇಶ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ. ಮರಿಯಪ್ಪ, ನಿರ್ದೇಶಕರಾದ ಮಹಾಲಿಂಗಯ್ಯ ಶಾಸ್ತ್ರಿ, ಜಿ.ಎನ್. ಸುಧೀರ್ ಹಾಗೂ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಪ್ರಮುಖರಾದ ಎನ್.ಜೆ. ರಾಜಶೇಖರ್, ಹೆಚ್.ವಿ. ಮಹೇಶ್ವ ರಪ್ಪ, ಎಸ್.ಎನ್. ರುದ್ರಮುನಿ ಸಜ್ಜನ್, ಎಂ. ಶ್ರೀಕಾಂತ್, ಹೆಚ್.ಎಂ. ಚಂದ್ರಶೇಖರಪ್ಪ, ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್, ಸೂಡಾ ಆಯುಕ್ತ ವಿಶ್ವನಾಥ್ ಪಿ. ಮುದ್ದಜ್ಜಿ, ನಾಗಭೂಷಣ್ ಕಲ್ಮನೆ, ಆರ್. ತೇಜೋ ಮೂರ್ತಿ, ಟಿ.ವಿ. ಶ್ರೀನಿವಾಸ್ ಭಾಗವಹಿಸಲಿದ್ದಾರೆ ಎಂದರು.
ಅಂದು ಬೆಳಗ್ಗೆ ೮ ಗಂಟೆಗೆ ಶ್ರೀ ರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಪೂಜೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಅಧ್ಯಕ್ಷರಾದ ಹೆಚ್.ಎಸ್. ಶಂಕರ್, ಹೆಚ್.ಎನ್. ಬಸವರಾಜ್, ಹೆಚ್. ಎಂ. ತಿಪ್ಪೇಸ್ವಾಮಿ, ಕೆ.ಸಿ. ನಾಗರಾಜ್, ವಿ.ಸಿ.ಎಸ್. ಮೂರ್ತಿ, ಹೆಚ್.ಸಿ. ಮರುಳೇಶ್ ಅವರಿಗೆ ಗುರುರಕ್ಷೆ ಮತ್ತು ಸನ್ಮಾನ ಇರುತ್ತದೆ. ಈ ಕಾರ್ಯಕ್ರಮಕ್ಕೆ ಸಂಘದ ಸದಸ್ಯರು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದರು.
ಗೋಷ್ಠಿಯಲ್ಲಿ ಉಪಾಧ್ಯಕ್ಷ ಹೆಚ್. ಎಂ. ಶಿವಾನಂದ್, ನಿರ್ದೇಶಕರಾದ ಎಂ.ಆರ್. ಪ್ರಕಾಶ್, ರುದ್ರಪ್ಪ ಎಂ., ರಾಜಶೇಖರ್ ಹೆಚ್.ಆರ್., ಕೆ.ಸಿ. ಪಾಲಾಕ್ಷಪ್ಪ, ಬಿ. ಚನ್ನಬಸಪ್ಪ, ಬಸವರಾಜ್ ಹೆಚ್.ಸಿ., ಬಳ್ಳೆಕೆರೆ ಸಂತೋಷ್, ದೇವಿರತ್ನಮ್ಮ, ಸಿಇಒ ಹೆಚ್.ಪಿ. ವಿಶ್ವೇಶ್ವರಯ್ಯ ಇದ್ದರು.