ಜಿಲ್ಲಾ ಸುದ್ದಿತಾಜಾ ಸುದ್ದಿ

ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಜೂಡೋ ಚಾಂಪಿಯನ್ ಪಟ್ಟ

Share Below Link

ಶಿಕಾರಿಪುರ : ಕುವೆಂಪು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಪುರುಷರ ಜೂಡೋ ಪಂದ್ಯಾವಳಿಯಲ್ಲಿ ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾಪಟುಗಳು ನಾಲ್ಕು ಚಿನ್ನ, ಒಂದು ಬೆಳ್ಳಿ ಹಾಗೂ ಮೂರು ಕಂಚಿನ ಪದಕಗಳನ್ನು ಗೆದ್ದು, ಒಟ್ಟು ೨೬ ಅಂಕಗಳೊಂದಿಗೆ ಚಾಂಪಿ ಯನ್ ಪಟ್ಟವನ್ನು ಸತತವಾಗಿ ತಮ್ಮದಾಗಿಸಿಕೊಂಡಿzರೆ.


ಇತ್ತೀಚೆಗೆ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿ ಹಾಗೂ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಕಾಲೇಜಿನ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿ zರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಯನೂರು ದ್ವಿತೀಯ ಸ್ಥಾನ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊಳೆಹೊನ್ನೂರು ತೃತೀಯ ಸ್ಥಾನ ಗಳಿಸಿವೆ.
ಸಮಾರೋಪದಲ್ಲಿ ಪಾಲ್ಗೊಂ ಡಿದ್ದ ಶಂಕರಘಟ್ಟದ ಕುವೆಂಪು ವಿವಿ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಸಹಾಯಕ ನಿರ್ದೇಶಕ ಡಾ. ರವೀಂದ್ರ ಗೌಡ ಮಾತನಾಡಿ, ಪಾಶ್ಚಿಮಾತ್ಯ ದೇಶಗಳು ಒಲಿಂಪಿಕ್ಸ್ ಮತ್ತು ಏಷ್ಯನ್ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ಮಾಡುತ್ತಿವೆ. ಆದರೆ, ನಮ್ಮ ದೇಶ ಹಾಗೂ ರಾಜ್ಯದಲ್ಲಿ ಜೂಡೋ ಕ್ರೀಡೆಯಲ್ಲಿ ಭಾಗವಹಿಸುವವರ ಸಂಖ್ಯೆ ಕಡಿಮೆಯಾಗುತ್ತಿರುವುದು ಪದಕಗಳ ನಿರೀಕ್ಷೆಯ ಮೇಲೂ ಪರಿಣಾಮ ಬೀರುತ್ತಿದೆ ಎಂದು ಅಭಿಪ್ರಾಯಪಟ್ಟರು.


ಜೂಡೋ ಕ್ರೀಡೆಯಲ್ಲಿ ಸಾಧನೆ ಮಾಡಲು ಅಗತ್ಯವಾದ ಪ್ರೋತ್ಸಾಹದ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ಜತೆಗೆ ಪೋಷಕರೂ ಕ್ರೀಡಾಪಟುಗಳಿಗೆ ಹೆಚ್ಚಿನ ಸಹಕಾರ ಮತ್ತು ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಬಿ.ಜಿ. ಚನ್ನಪ್ಪ ಮಾತನಾಡಿ, ಕ್ರೀಡಾಪಟುಗಳಲ್ಲಿ ಶ್ರದ್ಧೆ ಮತ್ತು ಸಂಸ್ಕಾರ ಬಹಳ ಮುಖ್ಯ. ಕ್ರೀಡೆಯು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡುವುದರ ಜತೆಗೆ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗಿದೆ ಎಂದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನಾರಾಯಣ್ ಮಾತನಾಡಿ, ಕ್ರೀಡೆಯು ವಿದ್ಯಾರ್ಥಿ ಗಳಲ್ಲಿ ಸೋಲು- ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುವ ಮನೋಭಾವ, ಸಂಘಟಿತ ಹೋರಾಟ, ನಾಯಕತ್ವ ಗುಣ, ಶಿಸ್ತು, ಸಮಯಪಾಲನೆ ಹಾಗೂ ದೈಹಿಕ ಸದೃಢತೆಯನ್ನು ಬೆಳೆಸುತ್ತದೆ ಎಂದು ತಿಳಿಸಿದರು.
ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಜೂಡೋ ಸ್ಪರ್ಧೆಯಲ್ಲಿ ಭಾಗವಹಿಸಿ ಕಾಲೇಜಿನ ಕೀರ್ತಿ ಹೆಚ್ಚಿಸಿದ ಹಿರಿಯ ಕ್ರೀಡಾಪಟುಗಳಾದ ಅರುಣ್ ಕುಮಾರ್ ಕೆ.ಎನ್. ಮತ್ತು ರಾಘವೇಂದ್ರ ಕೆ.ವೈ. ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಐಕ್ಯೂಎಸಿ ಸಂಚಾಲಕ ಡಾ. ಹರೀಶ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಹಾಲಸಿದ್ದಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಸುರೇಶ್, ಅಣ್ಣಪ್ಪ, ಹುಚ್ಚರಾಯಪ್ಪ, ಡಾ. ಮಾರುತಿ, ಅನಿಲ್ ಕುಮಾರ್, ಪ್ರಶಾಂತ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಸುಮಾ ಸ್ವಾಗತಿಸಿದರು. ಹುಚ್ಚರಾಯಪ್ಪ ಕಾರ್ಯಕ್ರಮ ನಿರೂಪಿಸಿದರು. ನಾರಾಯಣ್ ವಂದಿಸಿದರು.

Leave a Reply

Your email address will not be published. Required fields are marked *