ಶಿವಮೊಗ್ಗ ದಸರಾ: ಸೆ. ೨೨ರಿಂದ ಅ.೨ರವರೆಗೆ ೧೧ ದಿನಗಳ ಕಾಲ ಅದ್ದೂರಿ ಆಚರಣೆ….
ಶಿವಮೊಗ್ಗ : ನಾಡಹಬ್ಬ ಶಿವಮೊಗ್ಗ ದಸರಾವನ್ನು ಈ ಭಾರಿ ಅತ್ಯಂತ ಸಡಗರ-ಸಂಭ್ರಮ-ವಿಜೃಂಭಣೆಯಿಂದ ೧೧ ದಿನಗಳ ಕಾಲ ನಡೆಸಲಾಗುವುದು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ದಸರಾ ಆಚರಣೆಯಲ್ಲಿ ಮೈಸೂರು ಬಿಟ್ಟರೆ ಶಿವಮೊಗ್ಗ ದಸರಾವೇ ರಾಜ್ಯದಲ್ಲಿ ಅತ್ಯಂತ ಹೆಸರಾಗಿದೆ. ಶಿವಮೊಗ್ಗ ದಲ್ಲಿ ಸೆ.೨೨ರಿಂದ ಅ.೨ರವರೆಗೆ ಅತ್ಯಂತ ವಿಜೃಂಭಣೆಯಿಂದ ನಾಡಹಬ್ಬ ದಸರಾ ಆಚರಿಸಲಾಗುವುದು. ಇದಕ್ಕಾಗಿ ಈಗಾಗಲೇ ಎ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸುಮಾರು ೧೪ ಸಮಿತಿಯನ್ನು ರಚಿಸಲಾಗಿದೆ. ಎ ಸಮಿತಿಗಳು ಕ್ರೀಯಾಶೀಲವಾಗಿವೆ ಅಂಬಾರಿ ಕೂಡ ವಿಶೇಷವಾಗಿ ನಡೆಯಲಿದೆ. ಇಂದು ಮಧ್ಯಾಹ್ನ ಸಕ್ರೇಬೈಲು ಆನೆ ಬಿಡಾರಕ್ಕೆ ಹೋಗಿ ಗಜಪಡೆಗೆ ಆಮಂತ್ರಣ ನೀಡಿ, ಆಹ್ವಾನಿಸಲಾಗುವುದು ಎಂದರು.

ಸೆ.೨೨ರಂದು ಬೆಳಿಗ್ಗೆ ೧೧ ಗಂಟೆಗೆ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವಮೂರ್ತಿ ಪ್ರತಿಷ್ಠಾಪನೆ ಮಾಡಲಾಗುವುದು. ಈ ಬಾರಿ ನಿವೃತ್ತ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ ರಾಜು ಅವರು ಶಿವಮೊಗ್ಗ ದಸರಾ ಉದ್ಘಾಟಿಸಲಿದ್ದಾರೆ ಎಂದ ಅವರು, ರಾಜು ಅವರು ತರಿಕೆರೆ ಮೂಲದವರು. ಅವರು ಭಾರತೀಯ ಸೈನ್ಯಕ್ಕೆ ತನ್ನದೇ ಆದ ಶಕ್ತಿಯನ್ನು ತುಂಬಿದವರು. ಯುವಕರಿಗೆ ಸ್ಫೂರ್ತಿಯಾಗಿzರೆ. ಇಂತಹವರು ದಸರಾ ಉದ್ಘಾಟಿಸುತ್ತಿರುವುದು ಹೆಮ್ಮೆಯ ವಿಷಯ ಎಂದರಲ್ಲದೇ, ಉದ್ಘಾಟನಾ ಕಾರ್ಯಕ್ರಮ ದಲ್ಲಿ ಜಿ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಸೇರಿದಂತೆ ಎ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಗಣ್ಯರು ಭಾಗವಹಿಸಲಿ zರೆ ಎಂದರು.
ಪ್ರಮುಖವಾಗಿ ಸ್ವಾಗತ ಸಮಿತಿ, ಉತ್ಸವ ಸಮಿತಿ, ಮಹಿಳಾ ಹಾಗೂ ಗಮಕ ದಸರಾ ಸಮಿತಿ, ಅಲಂಕಾರ ದಸರಾ ಸಮಿತಿ, ಸಾಂಸ್ಕೃತಿಕ ದಸರಾ ಸಮಿತಿ, ಯುವ ದಸರಾ ಸಮಿತಿ, ಪರಿಸರ ಮತ್ತು ಪೌರಕಾರ್ಮಿಕರ ದಸರಾ ಸಮಿತಿ, ಯೋಗ ದಸರಾ ಸಮಿತಿ, ರಂಗದಸರಾ ಸಮಿತಿ, ರೈತ ದಸರಾ ಸಮಿತಿ, ಆಹಾರ ದಸರಾ ಸಮಿತಿ, ಚಲನಚಿತ್ರ ಹಾಗೂ ಪತ್ರಿಕಾ ದಸರಾ ಸಮಿತಿ, ಮಕ್ಕಳ ದಸರಾ ಸಮಿತಿ, ಕಲಾ ಮತ್ತು eನ ದಸರಾ ಸಮಿತಿಗಳಿದ್ದು, ಈ ಎ ಸಮಿತಿಗಳು ತಮ್ಮ ತಮ್ಮ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಡೆಸಿಕೊಡಲಿzರೆ ಎಂದರು.
ಸೆ.೨೩ರಂದು ಮಕ್ಕಳ ದಸರಾ, ಸುಗಮ ಸಂಗೀತ, ಯಕ್ಷಸಂಭ್ರಮ ನಡೆಯುತ್ತದೆ. ಸರಿಗಮಪ ಖ್ಯಾತಿಯ ಕುಮಾರಿ ದಿಯಾ ಹೆಗಡೆ ಹಾಗೂ ಅಂತರಾಷ್ಟ್ರೀಯ ನೃತ್ಯಗಾರ್ತಿ ಕು. ಋತುಸ್ಪರ್ಶ ಈ ಕಾರ್ಯಕ್ರಮಕ್ಕೆ ಆಗಮಿಸಲಿzರೆ. ಸೆ.೨೪ರ ಬುಧವಾರ ನಡೆಯಲಿರುವ ವಿವಿಧ ದಸರಾ ಕಾರ್ಯಕ್ರಮ ಗಳಲ್ಲಿ ಚಲನಚಿತ್ರ ನಟರುಗಳಾದ ಶರಣ್, ಕಾರುಣ್ಯರಾವ್, ಸಾಯಿಪ್ರಕಾಶ್, ರೂಪ ಅಯ್ಯರ್, ಗಣೇಶ್ ಮಂದಾರ್ತಿ ಮುಂತಾದವರು ಭಾಗವಹಿಸಲಿzರೆ.
ಸೆ.೨೫ರಂದು ರೈತ ದಸರಾ, ಕಲಾ ದಸರಾ ನಡೆಯಲಿದೆ. ಸೆ.೨೬ರಂದು ಕಲಾ ದಸರಾ ಕಾರ್ಯಕ್ರಮ ಸಂಜೆ ೬ ಗಂಟೆಗೆ ಶಿವಪ್ಪ ನಾಯಕ ಅರಮನೆಯಲ್ಲಿ ನಡೆಯಲಿದ್ದು, ರಂಗಭೂಮಿ ಕಲಾವಿದೆ ಅಕ್ಷತಾ ಪಾಂಡವರಪುರ ಉದ್ಘಾಟಿಸು ವರು. ಸೆ.೨೬ರಂದು ಸಂಜೆ ೫ ಗಂಟೆಗೆ ಶಿವಪ್ಪ ನಾಯಕ ಅರಮನೆಯಲ್ಲಿ ನಡೆಯಲಿರುವ ನಗೆಹಬ್ಬ ಕಾರ್ಯಕ್ರಮದಲ್ಲಿ ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಭಾಗವಹಿಸುವರು. ಸೆ.೨೭ರಂದು ಬೆಳಿಗ್ಗೆ ೧೦ ಗಂಟೆಗೆ ಪೌರ ಕಾರ್ಮಿಕರ ದಸರಾ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಹಾಗೆಯೇ ಸೆ.೨೮ರಂದು ಯೋಗದಸರಾ ಗಮಕ ಕಾರ್ಯಕ್ರಮ ನಡೆಯಲಿದ್ದು, ಸಂಜೆ ೫ ಗಂಟೆಗೆ ಪತ್ರಿಕಾ ಭವನದಲ್ಲಿ ಪತ್ರಕರ್ತರ ದಸರಾ ನಡೆಯಲಿದ್ದು, ಕುವೆಂಪು ವಿವಿ ಕುಲಪತಿ ಪ್ರೊ| ಶರತ್ ಅನಂತಮೂರ್ತಿ ಇನ್ನಿತರರು ಪಾಲ್ಗೊಳ್ಳುವರು ಎಂದರು.
ಸೆ.೨೮ರಂದು ಸಂಜೆ ೫ ಗಂಟೆಗೆ ಅಲ್ಲಮ ಪ್ರಭು (ಫ್ರೀಡಂಪಾರ್ಕ್) ಮೈದಾನದಲ್ಲಿ ಮ್ಯೂಸಿಕಲ್ ನೈಟ್ ನಡೆಯಲಿದ್ದು, ಖ್ಯಾತ ನಟ ಡಾ. ಶಿವರಾಜ್‌ಕುಮಾರ್ ಭಾಗವಹಿಸು ವರು. ಇವರ ಜೊತೆಗೆ ಸಚಿವ ಮಧು ಬಂಗಾರಪ್ಪ ಕೂಡ ಉಪಸ್ಥಿತರಿರುತ್ತಾರೆ. ಅಂದು ಅಲ್ಲಿ ಆಹಾರ ಮೇಳ ಇರುತ್ತದೆ ಎಂದರು.

ಸೆ.೨೯ರಂದು ಬೆಳಿಗ್ಗೆ ೧೦.೩೦ಕ್ಕೆ ಶಿವಪ್ಪನಾಯಕ ವೃತ್ತದಲ್ಲಿ ಸಾರ್ವಜನಿಕರಿಗೆ ಆಹಾರ ತಿನ್ನುವ ಸ್ಪರ್ಧೆ ನಡೆಯಲಿದೆ. ಹಾಗೆಯೇ ಸಂಜೆ ೬ ಗಂಟೆಗೆ ಗೀತ ನೃತ್ಯವೈಭವ ಕಾರ್ಯಕ್ರಮ, ಅಲ್ಲಮಪ್ರಭು ಮೈದಾನದಲ್ಲಿ ನಡೆಯಲಿದ್ದು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಮುಂತಾದವರು ಭಾಗವಹಿಸುವರು. ಸೆ.೩೦ ರಂದು ಕಲಾ ಮತ್ತು eನ ದಸರಾ ಕುವೆಂಪು ರಂಗಮಂದಿರದಲ್ಲಿ, ಅಡುಗೆ ಮಾಡುವ ಸ್ಪರ್ಧೆ ವೀರಶೈವ ಕಲ್ಯಾಣ ಮಂಟಪದಲ್ಲಿ, ಸಂಜೆ ೫.೩೦ಕ್ಕೆ ಫ್ರೀಡಂಪಾರ್ಕ್‌ನಲ್ಲಿ ನಾದವೈಭವ ಕಾರ್ಯಕ್ರಮ ನಡೆಯಲಿದ್ದು, ಖ್ಯಾತ ಚಲನಚಿತ್ರ ನಟಿ ಗೀತಾ ಇದರಲ್ಲಿ ಭಾಗವಹಿಸುತ್ತಾರೆ ಎಂದರು.
ಅ.೧ರಂದು ಸಂಜೆ ೫ ಗಂಟೆಗೆ ಇಲ್ಲಿಯೇ ನಡೆಯುವ ನಾಟ್ಯವೈಭವ ಕಾರ್ಯಕ್ರಮದಲ್ಲಿ ನಟಿ ಹರ್ಷಿತಾ ಪೂರ್ಣಚ್ಚ ಆಗಮಿಸುವರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೆ.ಎಸ್. ಈಶ್ವರಪ್ಪ ಭಾಗವಹಿಸಲಿzರೆ. ಅ.೨ರಂದು ಸಂಜೆ ೫ಗಂಟೆಗೆ ಸುರೇಖಾ ಹೆಗಡೆ ಮತ್ತು ಸಂಗಡಿಗರಿಂದ ಸುಗಮ ಸಂಗೀತ ಆಯೋಜಿಸಲಾಗಿದೆ ಎಂದರು.

ಅ.೨ರಂದು ದಸರಾ ಮಹೋತ್ಸವದ ಅಂಬಾರಿ ಮೆರವಣಿಗೆ ಮಧ್ಯಾಹ್ನ ೨.೩೦ಕ್ಕೆ ಆರಂಭವಾಗುತ್ತದೆ. ಅಂಬಾರಿ ಮೆರವಣಿಗೆ ಯಲ್ಲಿ ಈ ಬಾರಿ ಮೂರು ಆನೆಗಳಾದ ಸಾಗರ್, ಬಾಲಣ್ಣ, ಕುಂತಿ ಭಾಗವಹಿಸಲಿದ್ದು, ಸಾಗರ್ ಅಂಬಾರಿ ಹೋರಲಿನೆ ಎಂದರು.
ಶ್ರೀ ಚಾಮುಂಡೇಶ್ವರಿ ದೇವಿಯ ಬೆಳ್ಳಿ ವಿಗ್ರಹದ ಅಂಬಾರಿ ಮೆರವಣಿಗೆಗೆ ಶಿವಪ್ಪ ನಾಯಕ ಅರಮನೆ ಆವರಣದಲ್ಲಿ ನಂದಿಧ್ವಜ ಪೂಜೆ ನಡೆಯಲಿದೆ. ನಂತರ ಸಂಜೆ ಅಲ್ಲಮ ಪ್ರಭು ಮೈದಾನದಲ್ಲಿ ಬನ್ನಿಮುಡಿಯುವ ಕಾರ್ಯಕ್ರಮಕ್ಕೆ ತಹಶೀಲ್ದಾರ್ ವಿ.ಎಸ್. ರಾಜೀವ್ ಚಾಲನೆ ನೀಡುವರು. ಈ ಕಾರ್ಯಕ್ರಮದಲ್ಲಿ ಅತ್ಯಾಕರ್ಷಕ ಸಿಡಿಮದ್ದು ಮತ್ತು ರಾವಣ ದಹನವನ್ನು ಏರ್ಪಡಿಸ ಲಾಗಿದೆ. ಸಚಿವರುಗಳಾದ ಮಧುಬಂಗಾರಪ್ಪ ಹಾಗೂ ಶಿವರಾಜ್ ಎಸ್. ತಂಗಡಗಿ, ಬಿ.ಎಸ್. ಸುರೇಶ್, ರಹೀಂಖಾನ್ ಭಾಗವಹಿಸುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ಮಾಯಣ್ಣಗೌಡ, ವಿವಿವಿಧ ಸಮಿತಿಯ ಮುಖ್ಯಸ್ಥರಾದ ಪುಷ್ಪಾವತಿ ಹೆಚ್.ಎಸ್. ಸಂತೋಷ್ ಹೆಚ್. ರಾಥೋಡ್, ಅನುಪಮ ಟಿ.ಆರ್., ಹರೀಶ್ ಡಿ., ಸಿದ್ದಪ್ಪ ಸಿ.ಆರ್., ಮಧುನಾಯಕ, ಸುಧಾಕರ ಬಿಜ್ಜೂರ್, ಕೃಷ್ಣಮೂರ್ತಿ, ಸತೀಶ್ ಆರ್.ಬಿ. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

