ನೈರುತ್ಯ ಶಿಕ್ಷಕರ ಕ್ಷೇತ್ರ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ನಿಂದ ನಂಜೇಶ್ ಬೆಣ್ಣೂರು ಸ್ವರ್ಧೆಗೆ ತಯಾರಿ
ಚಿಕ್ಕಮಗಳೂರು: ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ತಾವು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದು, ಅರ್ಜಿ ಸಲ್ಲಿಸಿದ್ದೇನೆ. ಪಕ್ಷದ ಹೈಕಮಾಂಡ್ ತಮಗೆ ಟಿಕೆಟ್ ನೀಡುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಲತಾಣದ ರಾಜ್ಯ ಸಂಚಾಲಕ ನಂಜೇಶ್ ಬೆಣ್ಣೂರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಾಮಾಜಿಕ ಜಲತಾಣ ಪ್ರಮುಖ ಪಾತ್ರವಹಿಸಿದ್ದು, ಕಾಂಗ್ರೆಸ್ ಪಕ್ಷದ ಗೆಲುವಿಗೆ ಸಹಕಾರಿಯಾಗಿದೆ. ಕಾಂಗ್ರೆಸ್ ಪಕ್ಷ ಎ ಜನರನ್ನು ತಲುಪಲು ಸಾಧ್ಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಕಾರ್ಯವನ್ನು ಶ್ಲಾಸಿzರೆ ಎಂದು ಹೇಳಿದರು.
ತಾವು ರಾಜ್ಯ ಇನ್ಸಿಟ್ಯೂಷನ್ ಆಫ್ ಇಂಜಿನಿರ್‍ಸ್ ಸ್ಟೇಟ್ ಕಮಿಟಿ ಸದಸ್ಯ, ಆದಿ ಚುಂಚನಗಿರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕ, ಚಿಕ್ಕಮಗಳೂರು ಭಾರತೀಯ ಯುವ ರೆಡ್ ಕ್ರಾಸ್ ಸಂಸ್ಥೆ ಹಾಗೂ ಭಾರತೀಯ ಯುವ ರೆಡ್ ಕ್ರಾಸ್ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದು, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಫರ್ಧೆಗೆ ವ್ಯಾಪಕ ಬೆಂಬಲವೂ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುವ ಭರವಸೆ ಇದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಲತಾಣದಲ್ಲಿ ರಾಜ್ಯ ಸಂಯೋಜಕನಾಗಿ ಈ ಹಿಂದೆ ಕಾರ್ಯನಿರ್ವಹಿಸಿದ್ದು, ತಮ್ಮ ಕಾರ್ಯವನ್ನು ಮೆಚ್ಚಿ ಕಾಂಗ್ರೆಸ್ ನಾಯಕರು ನನ್ನನ್ನು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಲತಾಣದ ರಾಜ್ಯ ಸಂಚಾಲಕನಾಗಿ ಆಯ್ಕೆ ಮಾಡಿzರೆ ಎಂದರು.
ರಾಜ್ಯ ಸಂಚಾಲಕರನ್ನಾಗಿ ಆಯ್ಕೆ ಮಾಡಿದ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ಸಾಮಾಜಿಕ ಜಲತಾಣ ವಿಭಾಗದ ರಾಷ್ಟ್ರೀಯ ಮುಖ್ಯಸ್ಥ ಮನುಜೈನ್ ಹಾಗೂ ಯುವ ಕಾಂಗ್ರೆಸ್‌ನ ರಾಜಧ್ಯಕ್ಷ ಹ್ಯಾರಿಸ್ ನೆಲಪಾಡ್, ಸಾಮಾಜಿಕ ಮಾಧ್ಯಮದ ಅಧ್ಯಕ್ಷರಾದ ರಾಹುಲ್ ಮನೋಜ್‌ಕುಮಾರ್ ಸೇರಿದಂತೆ ಎ ನಾಯಕರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಧರ್ಮಯ್ಯ, ನಾಗೇಶ್, ಅಭಿಷೇಕ್, ಜಗದೀಶ್ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.