ಜಿಲ್ಲಾ ಸುದ್ದಿತಾಜಾ ಸುದ್ದಿ

ಕ್ರೀಡೆಯಿಂದ ದೇಹ -ದೇಶದ ಆರೋಗ್ಯವೂ ಸದೃಢವಾಗುತ್ತದೆ: ಸ್ವಾಮೀಜಿ

Share Below Link

ಶಿವಮೊಗ್ಗ: ಕ್ರೀಡೆಯಿಂದ ದೇಹದ ಆರೋಗ್ಯವಷ್ಟೇ ಅಲ್ಲದೇ ದೇಶದ ಆರೋಗ್ಯವೂ ಕೂಡ ಉತ್ತಮವಾಗಿರುತ್ತದೆ. ಅಲ್ಲದೇ ಕ್ರೀಡಾಪಟುಗಳಿಂದ ದೇಶದ ಹಿರಿಮೆ ವಿಶ್ವದಲ್ಲಿ ಹೆಚ್ಚಾಗುತ್ತವೆ ಎಂದು ಆದಿ ಚುಂಚನಗಿರಿ ಶಾಖಾ ಮಠದ ಪ್ರಧಾನ ಕಾರ್ಯದರ್ಶಿ ಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.
ನಗರದ ನೆಹರು ಕ್ರೀಡಾಂಗಣದಲ್ಲಿ ಶುಕ್ರವಾರ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಮತ್ತು ಜಿ ವಾಲಿಬಾಲ್ ಸಂಸ್ಥೆಯ ಆಶ್ರಯದಲ್ಲಿ ೭೬ನೇ ಸ್ವಾತಂತ್ರ್ಯೋತ್ಸವದ ಹಾಗೂ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಸುವರ್ಣ ಮಹೋತ್ಸವ ಅಂಗವಾಗಿ ಶಿವಮೊಗ್ಗ ಜಿ ಮಟ್ಟದ ಆಹ್ವಾನಿತ ಪ್ರೌಢಶಾಲಾ ಬಾಲಕ ಮತ್ತು ಬಾಲಕೀಯರಿಗಾಗಿ ಚುಂಚಾದ್ರಿಕಪ್ ವಾಲಿಬಾಲ್ ಪಂದ್ಯಾವಳಿ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ, ಆದರೆ ಭಾಗವಹಿಸುವಿಕೆ ಅತ್ಯಂತ ಮುಖ್ಯವಾಗಿರುತ್ತದೆ. ಚುಂಚಾದ್ರಿ ವಾಲಿಬಾಲ್ ಪಂದ್ಯಾವಳಿಯಲ್ಲಿ ಆಟವಾಡಿ ದಂತಹ ಕ್ರೀಡಾಪಟುಗಳು ಇಂದು ರಾಜ್ಯ,ರಾಷ್ಟ್ರ ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ zರೆ. ಇದು ಪಂದ್ಯಾವಳಿಯ ಹಿರಿಮೆಯಾಗಿದೆ ಎಂದರು.
ಕ್ರೀಡಾಪಟುಗಳು ಈ ದೇಶದ ಆಸ್ತಿ. ನಮ್ಮ ಅನೇಕ ಕ್ರೀಡಾ ಸಾಧಕರು ಒಲಂಪಿಕ್ಸ್‌ನಲ್ಲಿ ಜಯಶಾಲಿಯಾಗಿ ರಾಷ್ಟ್ರಧ್ವಜವನ್ನು ಎತ್ತಿ ಹಿಡಿಯುವ ಮೂಲಕ ಭವ್ಯ ಭಾರತದ ಹಿರಿಮೆ ಗರಿಮೆಯನ್ನು ಹೆಚ್ಚಿಸಿzರೆಂದು ಹೇಳಿದರು.
ಸತತ ೨೫ ವರ್ಷಗಳ ಕಾಲ ಸಂಸ್ಥೆ ಪಂದ್ಯಾವಳಿಯನ್ನು ಆಯೋಜಿಸಿಕೊಂಡು ಬಂದಿದೆ. ಆದರೆ ಕೋವಿಡ್ ಮಹಾಮಾರಿ ಯಿಂದಾಗಿ ೨ ವರ್ಷಗಳ ಕಾಲ ಪಂದ್ಯಾವಳಿ ನಡೆಯಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಶ್ರೀಗಳು ಮುಂದಿನ ದಿನಗಳಲ್ಲಿ ಯಾವ ಅಡೆತಡೆಯೂ ಬರದಂತೆ ಪಂದ್ಯಾವಳಿ ಮುಂದೆ ಸಾಗಲಿದೆ ಎಂದು ಆಶಿಸಿದರು.
ಪಂದ್ಯಾವಳಿಗೆ ಚಾಲನೆ ನೀಡಿದ ಜಿಧಿಕಾರಿ ಡಾ. ಆರ್. ಸೆಲ್ವಮಣಿ, ಮಾತನಾಡಿ, ಚಂಚಾದ್ರಿ ಕಪ್ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಮೊದಲ ಮೆಟ್ಟಿಲಾಗಿದೆ. ಪ್ರತಿಯೊಬ್ಬ ಕ್ರೀಡಾಪಟು ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು. ಆಟದಲ್ಲಿ ಸೋಲು ಗೆಲುವು ಮುಖ್ಯವಲ್ಲ. ಎರಡನ್ನೂ ಸಮಾನ ವಾಗಿ ನೋಡುವ ಗುಣವನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ಆದಿಚುಂಚನಗಿರಿ ಮಠದಿಂದ ಸತತ ೨೧ ವರ್ಷ ಚುಂಚಾದ್ರಿ ಕಪ್ ಆಯೋಜನೆ ಮಾಡುತ್ತಿರುವುದು ಖುಷಿಯ ವಿಚಾರ. ಪ್ರಸ್ತುತ ಗ್ರಾಮ ಪಂಚಾಯಿತಿಗಳಲ್ಲಿ ಸಣ್ಣ ಪುಟ್ಟ ಜಗ ಇದ್ದರೂ ವಾಲಿಬಾಲ್ ಆಡುವುದನ್ನು ನೋಡಿದ್ದೇವೆ. ಇಲ್ಲಿ ಸ್ಪರ್ಧಿಸಿರುವ ಕ್ರೀಡಾಪಟುಗಳು ಜಿಮಟ್ಟದಿಂದ ರಾಜ್ಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವಂತಾ ಗಲಿ ಎಂದು ಆಶೀಸಿದರು.
ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಬಿಇಒ ಪಿ. ನಾಗರಾಜ್, ಜಿ ವಾಲಿಬಾಲ್ ಸ್ಥಂಸ್ಥೆಯ ಕಾರ್ಯದರ್ಶಿ ಶಶಿ, ಅಧ್ಯಕ್ಷ ಭಾಸ್ಕರ್ ಜಿ ಕಾಮತ್ ಮತ್ತು
ಶ್ರಿ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ) ಶಿವಮೊಗ್ಗ ಶಾಖೆಯ ನಿರ್ದೇಶಕರುಗಳು, ಆಡಳಿತಾಧಿಕಾರಿಗಳು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.