ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಹೊಸ ಸೇತುವೆ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರದಿಂದ ೪೦ ಕೋಟಿ ರೂ. ಬಿಡುಗಡೆ …

Share Below Link

ಶಿವಮೊಗ್ಗ,:ಸುಮಾರು ೧೫೦ ವರ್ಷಗಳಷ್ಟು ಹಳೆಯದಾಗಿ ರುವ ತುಂಗಾ ಸೇತುವೆ ಶಿಥಿಲವಾ ಗಿದ್ದು, ಹೊಸ ಸೇತುವೆ ನಿರ್ಮಾಣ ಕ್ಕಾಗಿ ೪೦ ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು, ಇದಕ್ಕಾಗಿ ಸಹಕರಿಸಿದ ಲೋಕೋಪ ಯೋಗಿ ಸಚಿವ ಸತೀಶ್ ಜರಕಿ ಹೊಳಿ ಅವರಿಗೆ ವಿಶೇಷ ಅಭಿನಂದ ನೆಗಳು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ೨೦೧೯ರಲ್ಲಿ ಶಿವಮೊಗ್ಗದಲ್ಲಿ ತುಂಬಾ ಮಳೆ ಬಂದು, ಅನೇಕ ಸಮಸ್ಯೆ ಎದುರಿಸಿzವು. ಆಗ ತುಂಗಾ ನದಿ ಹಳೆ ಸೇತುವೆ ಬಿರುಕು ಬಿಡ್ತಾ ಇದೆ ಎಂಬ ಆತಂಕ. ಅಲ್ಲಿ ಭಾರೀ ವಾಹನ ಬಿಡಬಾರದು ಎಂದು ಅವತ್ತೇ ನಿರ್ಧಾರ ಆಗಿತ್ತು. ಅವತ್ತಿನಿಂದಲೇ ವಿಶೇ?ವಾದ ಪ್ರಯತ್ನ ಮಾಡಿದ ಪರಿಣಾಮ ನಾಗರೀಕರಿಗೆ ಹೊಸ ಸೇತುವೆಯ ನಿರೀಕ್ಷೆ ಸಫಲವಾಗುವ ಸನಿಹಕ್ಕೆ ಬಂದು ನಿಂತಿದೆ ಎಂದರು.
ಬಹಳ ಮುಖ್ಯವಾಗಿ ಶಿವಮೊಗ್ಗಕ್ಕೆ ಹೊಸ ಸೇತುವೆ ನಿರ್ಮಾಣಕ್ಕೆ ಈಗಿನ ಮತ್ತು ಆಗಿನ ಲೋಕೋಪಯೋಗಿ ಸಚಿವ ಸತೀಶ್ ಜರಕಿಹೊಳಿ ಅವರೇ ಕಾರಣ. ಅವರು ವಿಶೇಷ ಆಸಕ್ತಿ ವಹಿಸಿದರು. ಸುಮಾರು ೬ ಬಾರಿ ಅವರನ್ನು ಭೇಟಿ ಮಾಡಿದೆ. ಅಧಿಕಾರಿಗಳ ಜೊತೆ ಸಂಪರ್ಕದಲ್ಲಿz. ಪರಿಣಾಮ, ೪೦ ಕೋಟಿ ಬಿಡುಗಡೆ ಆಗಿದೆ ಎಂದರು.


ಸತೀಶ್ ಜರಕಿಹೊಳಿ ಅವರು ಶಿವಮೊಗ್ಗಕ್ಕೆ ಬಂದ ಸಂದರ್ಭದಲ್ಲಿ ಅವರು ಒಂದು ಮಾತು ಹೇಳಿದ್ದರು. ನಿತಿನ್ ಗಡ್ಕರಿ ಅವರು ಬಂದಿದ್ದ ವೇಳೆ ಭರವಸೆ ನೀಡಿದ್ದರು. ಅದು ಈಗ ಈಡೇರಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗದ ನಾಗರೀಕರ ಪರವಾಗಿ ಅಭಿನಂದನೆ ತಿಳಿಸುತ್ತೇನೆ ಎಂದರು.
ಯಾವುದೇ ಸರ್ಕಾರ ಇದ್ದರೂ ಕೂಡ ನಾವು ಆ ಸರ್ಕಾರದ ಜೊತೆ ಸ್ಪಂದನೆ ನಡೆಸಿದಾಗ ಮತ್ತು ಸರ್ಕಾರದ ಸಚಿವರಿಗೆ ಇಚ್ಛಾಶಕ್ತಿ ಇzಗ ಈ ರೀತಿಯ ಒಳ್ಳೆಯ ಕೆಲಸಗಳು ಆಗಲು ಸಾಧ್ಯ. ಈ ಹಿನ್ನೆಲೆಯಲ್ಲಿ ಜರಕಿಹೊಳಿ ಅವರು ಶಿವಮೊಗ್ಗದ ಬಗ್ಗೆ ಅಭಿಮಾನ ಇಟ್ಟುಕೊಂಡು ನನ್ನ ಸ್ಪಂದನೆಗೆ ಸ್ಪಂದಿಸಿzರೆ. ಇನ್ನು ೩ ತಿಂಗಳಲ್ಲಿ ಟೆಂಡರ್ ಕರೆಯಲಾಗುವುದು. ಉಳಿದಂತೆ ಈಗಿರುವ ಹಳೆ ಸೇತುವೆ ಯನ್ನು ಸಂಪೂರ್ಣವಾಗಿ ಕೆಡವಿ ಹೊಸ ಸೇತುವೆ ನಿರ್ಮಾಣವಾಗಿ ಶಿವಮೊಗ್ಗ ಜನರ ಕನಸು ನನಸಾ ಗಲಿದೆ. ಮತ್ತೊಮ್ಮೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಜರಕಿಹೊಳಿ ಅವರಿಗೆ ಅಭಿನಂದನೆ ಗಳು ಎಂದು ಮುಕ್ತಕಂಠದಿಂದ ಶಾಸಕರು ಪ್ರಶಂಸಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಧ್ಯಕ್ಷ ಜಗದೀಶ್, ದೀನದಯಾಳ್, ನಾಗರಾಜ್, ಪ್ರಭಾಕರ್, ಮಂಜುನಾಥ್ ನವುಲೆ, ಪ್ರಭು, ಶ್ರೀನಾಗ್ ಮೊದಲಾದವರು ಇದ್ದರು.

Leave a Reply

Your email address will not be published. Required fields are marked *