ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮಾದಕ ವಸ್ತುಗಳಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ…

Share Below Link

ಶಿವಮೊಗ್ಗ : ಮಾದಕ ವಸ್ತುಗಳಿಂದ ದೂರವಿದ್ದು, ಉತ್ತಮ ಭವಿಷ್ಯವನ್ನು ರೂಪಿಸಿ ಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಕರೆ ನೀಡಿದರು.
ಅವರು ಇಂದು ಜಿಲ್ಲಾ ಪೊಲೀಸ್ ಇಲಾಖೆ, ಕೋಟೆ ಪೊಲೀಸ್ ಠಾಣೆ. ಸಹ್ಯಾದ್ರಿ ಕಲಾ ಕಾಲೇಜ್ ಆಶ್ರಯ ದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿ ಸಿದ್ದ ಮಾದಕ ವಸ್ತುಗಳ ವಿರೋಧಿ ದಿನಾಚರಣೆಯ ಜಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಇತ್ತೀಚಿನ ವರ್ಷಗಳಲ್ಲಿ ಯುವಕರು ಅದರಲ್ಲೂ ವಿದ್ಯಾರ್ಥಿ ಗಳು ಮಾದಕ ವಸ್ತುಗಳತ್ತ ಆಕರ್ಷಿತ ರಾಗುತ್ತಿದ್ದಾರೆ. ಕುತೂಹಲಕ್ಕಾಗಿ ಮಾದಕ ವಸ್ತುಗಳ ಚಟವನ್ನು ಅಂಟಿಸಿಕೊಂಡು ಅದಕ್ಕೆ ದಾಸರಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಹದಿಹರೆಯದ ವರಲ್ಲಿ ಈ ಸಮಸ್ಯೆ ಹೆಚ್ಚಾಗುತ್ತಿರುವುದು ಅತ್ಯಂತ ಅಪಾಯಕಾರಿಯಾಗಿದೆ. ಯುವಕರು ಇದರಿಂದ ಹೊರ ಬರಬೇಕು. ಪೊಲೀಸ್ ಇಲಾಖೆಯ ಜೊತೆಗೆ ಪೋಷಕರು, ಶಿಕ್ಷಕರು, ಸಂಘ ಸಂಸ್ಥೆಗಳು ಎಲ್ಲರೂ ಸೇರಿ ಮಾದಕ ವಸ್ತುಗಳ ವಿರುದ್ಧ ಸಮರ ಸಾರಿದಾಗ ಮಾತ್ರ ತಡೆಯಲು ಸಾಧ್ಯ ಎಂದರು.
ಮುಖ್ಯವಾಗಿ ವಿದ್ಯಾರ್ಥಿಗಳು ಈ ಬಗ್ಗೆ ಜಗೃತರಾಗಬೇಕಾಗಿದೆ. ಒಳ್ಳೆಯ ಸ್ನೇಹಿತರನ್ನು ಪಡೆಯಿರಿ. ಯಾರಾ ದರೂ ದುಶ್ಚಟಕ್ಕೆ ಬಲಿಯಾಗಿದ್ದರೆ ಆ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ. ಪೋಷಕರು ಕೂಡ ತಮ್ಮ ಮಕ್ಕಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಾದಕ ವ್ಯಸನಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದವರು ಕೂಡ ಗಾಂಜ ಬೆಳೆಯುವ ಉದಾಹರಣೆ ಇದೆ. ವಿದ್ಯಾವಂತರೆ ಮಾದಕ ವ್ಯಸನಿಗಳಾಗಿ ಸಮಾಜಕ್ಕೆ ಕಂಟಕವಾಗುತ್ತಿದ್ದಾರೆ. ಸಮಾಜದ ಹಿತ ಕಾಪಾಡುವವರೇ ಈ ರೀತಿಯಾದರೆ ಭವಿಷ್ಯದ ಗತಿ ಏನು ಎಂದವರು ಆತಂಕ ವ್ಯಕ್ತಪಡಿಸಿದರು.
ಕಾಲೇಜಿನ ಪ್ರಾಂಶುಪಾಲ ಸೈಯದ್ ಸನಾವುಲ್ಲಾ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಕೆ.ಎನ್. ಮಂಜುನಾಥ್ ಮಾತನಾಡಿ, ಪೊಲೀಸ್ ಇಲಾಖೆಯ ಅಂಕಿ ಅಂಶಗಳು ಮಾದಕ ವ್ಯಸನಿಗಳು ಹೆಚ್ಚಾಗುತ್ತಿರುವ ಬಗ್ಗೆ ಆತಂಕ ಮೂಡಿಸುತ್ತವೆ. ಕೆಲವು ವರ್ಷಗಳ ಹಿಂದೆ ವರ್ಷಕ್ಕೆ ಮೂರು ನಾಲ್ಕು ಗಾಂಜ ಕೇಸ್ ಗಳು ಇರುತ್ತಿದ್ದವು. ಈಗ ವರ್ಷಕ್ಕೆ ಮುನ್ನೂರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ ಎಂದರೆ ಇದನ್ನು ತಡೆಗಟ್ಟಬೇಕಾದ ಅಗತ್ಯವಿದೆ ಎಂದರು.
ಕೋಟೆ ಠಾಣೆಯ ರವಿಕುಮಾರ್ ಅವರು ಪ್ರಾತ್ಯಕ್ಷಿಕೆ ಮೂಲಕ ಸೈಬರ್ ಅಪರಾಧಗಳು, ಇದರಿಂದ ಎಚ್ಚರಿಕೆ ವಹಿಸಬೇಕಾದ ಕ್ರಮಗಳು, ಮೊಬೈಲ್‌ನ ಕೆಲವು ಆಪ್‌ಗಳಿಂದ ಆಗುವ ತೊಂದರೆಗಳು, ಹಣ ಕದಿಯುವ ಜಲ ವಿಷಯಗಳ ಕುರಿತಂತೆ ಜಗೃತಿ ಮೂಡಿಸಿದರು. ಕಾರ್ಯ ಕ್ರಮದಲ್ಲಿ ಡಿ.ವೈ.ಎಸ್.ಪಿ. ಬಾಬು ಅಂಜನಪ್ಪ, ಕೋಟೆ ಪೊಲೀಸ್ ಠಾಣೆಯ ಕೊಪ್ಪದ್ ಇದ್ದರು.

Leave a Reply

Your email address will not be published. Required fields are marked *