ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಟಾನ : ಹೆಚ್.ಎಂ.ಮಧು
ಶಿವಮೊಗ್ಗ : ಜಿ ಯಲ್ಲಿ ಪಂಚ ಗ್ಯಾರಂಟಿ ಯೋಜನೆ ಗಳು ಯಶಸ್ವಿಯಾಗಿ ಅನುಷ್ಟಾನ ಗೊಳ್ಳುತ್ತಿದ್ದು, ಗೃಹಲಕ್ಷ್ಮಿ ಯೋಜನೆಯಡಿ ೩೧ನೇ ಕಂತಿನ ಹಣ ಬಿಡುಗಡೆಯಾಗಿದೆ. ಗೃಹಲಕ್ಷ್ಮಿ ಯೋಜನೆ ನವೀಕರಣಕ್ಕೆ ಮನೆ ಮನೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಾಗುತ್ತಿದ್ದು ಸಾರ್ವಜನಿಕರು ತಮ್ಮಲ್ಲಿರುವ ಮಾಹಿತಿ ನೀಡಿ ಸಹಕರಿಸಬೇಕೆಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಹೆಚ್ ಎಂ ಮಧು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ಯಡಿ ತಾಲ್ಲೂಕಿನಲ್ಲಿ ಈವರೆಗೆ ೧೦೮೩೫೮ ಫಲಾನುಭವಿಗಳು ನೋಂದಣಿಯಾಗಿದ್ದು, ೪೨ ಫಲಾನುಭವಿಗಳ ಎನ್‌ಪಿಸಿಐ ಬಾಕಿ ಇದೆ. ೨೦೪೪ ಐಟಿ/ಜಿಎಸ್‌ಜಿ ಫಲಾನುಭವಿಗಳಿದ್ದು ೩೦೪ ಅರ್ಜಿ ಗಳನ್ನು ಸ್ವೀಕರಿಸಲಾಗಿದೆ. ಮರಣ ಹೊಂದಿರುವ ಬಗ್ಗೆ ೩೪೯ ಅರ್ಜಿ ಸ್ವೀಕರಿಸಲಾಗಿದ್ದು ಮೇ ಮಾಹೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ ಎಂದರು.
ಪಡಿತರ ಚೀಟಿ ಪರಿಷ್ಕರಣೆ ವೇಳೆ ಬಿಪಿಎಲ್ ಕಾರ್ಡ್ ರzಗಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆಯಾಗಿರುವ ಕಾರ್ಡ್ಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗಿದೆ. ಅರ್ಹರಾಗಿದ್ದರೂ ಕೆಲವು ತಾಂತ್ರಿಕ ಕಾರಣಗಳಿಂದ ಅಥವಾ ತಪ್ಪು ಮಾಹಿತಿಯಿಂದ ಬಿಪಿಎಲ್ ಕಾರ್ಡ್‌ಗಳು ಎಪಿಲ್ ಕಾರ್ಡುಗಳಾಗಿ ಬದಲಾಗಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ಸರ್ಕಾರ ಅವಕಾಶ ನೀಡಿತ್ತು. ಕೆಲವು ತಾಂತ್ರಿಕ ಕಾರಣಗಳಿಂದ ಬಿಪಿಎಲ್ ನೀಡುವುದು ತಡವಾಗಿದೆ.
೪೮ ಗಂಟೆಯೊಳಗೆ ಬಿಪಿಎಲ್ ಕಾರ್ಡ್ : ಸುಮಾರು ೧೦೧ ಖಾಯಿಲೆಗಳಿಗೆ ತುರ್ತು ಆರೋಗ್ಯ ಸೇವೆ ಅಗತ್ಯವಿರುವವರು ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿದಲ್ಲಿ ೪೮ ಗಂಟೆಗಳ ಒಳಗೆ ಬಿಪಿಎಲ್ ಕಾರ್ಡ್ ನೀಡಲಾಗು ವುದು ಎಂದು ತಿಳಿಸಿದರು.

ತಾಲ್ಲೂಕಿನಲ್ಲಿ ಶೂನ್ಯ ವಿದ್ಯುತ್ ಬಿಲ್ ಪಡೆಯುತ್ತಿರುವ ಗ್ರಾಹಕರ ವಿವರಗಳನ್ನು ಪಡೆದ ಅಧ್ಯಕ್ಷರು, ಗೃಹಜ್ಯೋತಿ ಯೋಜನೆ ನವೀಕರಣ ಸಂಬಂಧ ಮೆಸ್ಕಾಂ ಅಧಿಕಾರಿ, ನೌಕರರು ಮನೆ ಮನೆ ಭೇಟಿ ನೀಡುತ್ತಿದ್ದು, ಸಾರ್ವಜನಿಕರು ಗೊಂದಲಕ್ಕೀಡಾಗದೇ ತಮ್ಮಲ್ಲಿರುವ ಮಾಹಿತಿಯನ್ನು ನೀಡಿ ಸಹಕರಿಸ ಬೇಕು ಎಂದು ಮನವಿ ಮಾಡಿದ ಅವರು ತಾಂತ್ರಿಕ ದೋಷಗಳಿಂದ ವಂಚಿತರಾದ ಗ್ರಾಹಕರ ಸಮಸ್ಯೆ ಗಳನ್ನು ಮೆಸ್ಕಾಂ ಅಧಿಕಾರಿಗಳು ಸ್ಥಳದ ಪರಿಹರಿಸಬೇಕು ಎಂದರು.
ಯುವನಿಧಿ ಯೋಜನೆ: ಪದವಿ ಮುಗಿಸಿ ನಿರುದ್ಯೋಗಿ ಗಳಾಗಿರುವ ಯುವಕ-ಯುವತಿ ಯರಿಗೆ ಭತ್ಯೆ ತಲುಪುತ್ತಿರುವ ಬಗ್ಗೆ ಮಾಹಿತಿ ಪಡೆದ ಅವರು ತಾಲ್ಲೂಕಿನಲ್ಲಿ ಈವರೆಗೆ ೩೪೦೮೮ ಫಲಾನುಭವಿಗಳಿಗೆ ರೂ.೧೦,೫೯,೩೭,೫೦ ಹಣವನ್ನು ಜಮಾ ಮಾಡಲಾಗಿದೆ ಎಂದರು.
ತಾಲ್ಲೂಕಿನಲ್ಲಿ ಶಕ್ತಿ ಯೋಜನೆ ಯಡಿ ಮಹಿಳೆಯರ ಉಚಿತ ಪ್ರಯಾಣದ ಯಶಸ್ವಿ ಅನುಷ್ಠಾನದ ಕುರಿತು ಸಾರಿಗೆ ಸಂಸ್ಥೆಯ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಶಾಲಾ-ಕಾಲೇಜು ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಬಗ್ಗೆ ಹೆಚ್ಚಿನ ಪ್ರಚಾರ ನೀಡುವಂತೆ ತಿಳಿಸಿದರು.
ಸಭೆಯಲ್ಲಿ ಜಿ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಆರ್ ಶಿವಣ್ಣ ತಾಲ್ಲೂಕು ಗ್ಯಾರಂಟಿ ಸಮಿತಿ ಸದಸ್ಯರು, ತಾಲ್ಲೂಕು ಇಓ ಪರಮೇಶ್ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

