ಓಪಿಎಸ್ ಜಾರಿ – ಸೇವಾ ಅಧಿನಿಯಮ ರಚನೆಗೆ ಧ್ವನಿಯಾಗಲು ನನ್ನನ್ನು ಬೆಂಬಲಿಸಿ: ಶಿಕ್ಷಕರಲ್ಲಿ ಆಚಾರ್‍ಯ ಮನವಿ
ಶಿವಮೊಗ್ಗ : ಬಹುವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಓಪಿಎಸ್ ಜಾರಿಯೂ ಸೇರಿದಂತೆ ಶಿಕ್ಷಕರ ಪ್ರತ್ಯೇಕ ಸೇವಾ ಅಧಿನಿಯಮ ರಚನೆಗೆ ಆದ್ಯತೆ ನೀಡ ಲಾಗುವುದು ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಡಾ. ಎಸ್. ಆರ್. ಹರೀಶ್ ಆಚಾರ್ಯ ಮಾಹಿತಿ ನೀಡಿದರು.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಿಕ್ಷಣ ಕ್ಷೇತ್ರ ಇಂದು ಹಲವಾರು ಸಮಸ್ಯೆಗಳ ಆಗರ ವಾಗಿದೆ. ಶಿಕ್ಷಕ ಸಮುದಾಯದ ಸಮಸ್ಯೆಗಳು ಮುಗಿಯದ ಗೋಳಾಗಿ ಹಾಗೆಯೇ ಉಳಿದು ಕೊಂಡಿದೆ. ಈ ಸಮಸ್ಯೆಗಳು ಮುಗಿಯುವ ಬದಲಾಗಿ ದಿನೇದಿನೆ ಜಟಿಲಗೊಳ್ಳುತ್ತಿದೆ ಎಂದು ಅವರು ವಿವರಿಸಿದರು.
ಖಾಸಗಿ/ಸರಕಾರಿ/ಅನುದಾನಿತ ಶಾಲಾ -ಕಾಲೇಜು ಶಿಕ್ಷಕರ ಸಮಸ್ಯೆಗಳು, ದೈಹಿಕ ಶಿಕ್ಷಣ ಹಾಗೂ ಕಲಾ ಮತ್ತು ಕಸೂತಿ ಶಿಕ್ಷಕರ ಸಮಸ್ಯೆಗಳು, ವಸತಿ ಶಾಲಾ ಶಿಕ್ಷಕರ ಸಮಸ್ಯೆಗಳು, ಭಡ್ತಿ ಹೊಂದಿದ ಶಿಕ್ಷಕರ ಸಮಸ್ಯೆಗಳು, ಮುಖ್ಯೋ ಪಾಧ್ಯಾಯರು ಹಾಗೂ ಪ್ರಾಂಶುಪಾಲರ ಸಮಸ್ಯೆಗಳು, ಪಿಂಚಣಿಯ ಸಮಸ್ಯೆ, ಭರ್ತಿಯಾಗದೆ ಖಾಲಿ ಇರುವ ಶಿಕ್ಷಕ ಹುzಗಳ ಸಮಸ್ಯೆಗಳು, ಪರೀಕ್ಷಾ ಹಾಗೂ ಮಲ್ಯ ಮಾಪನ ಕಾರ್ಯ ನಿರ್ವಹಣಾ ಸಮಸ್ಯೆಗಳು ಇತ್ಯಾದಿ ವಿಷಯಗಳು ಯಾವುದೇ ಪರಿಹಾರ ವನ್ನು ಕಾಣದೆ, ಪರಿಹಾರಗೊಳ್ಳುವ ನಿರೀಕ್ಷೆಯೂ ಇಲ್ಲದೆ ಹಾಗೆಯೇ ಮುಂದುವರಿಯುತ್ತಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿ zರೆ. ಎ ಶಿಕ್ಷಕ ಸಂಘಟನೆಗಳ ಪ್ರಮುಖರು, ಶಿಕ್ಷಣ ತಜ್ಞರು, ಕಾನೂನು ತಜ್ಞರ ಅಭಿಪ್ರಾಯ ಪಡೆದು ವಿಧಾನ ಪರಿಷತ್‌ನ ಮುಂದಿನ ಅಧಿವೇಶನದಲ್ಲಿ ಖಾಸಗಿ ಮಸೂದೆ ಯನ್ನ ಮಂಡಿಸುವುದಾಗಿ ಅವರು ತಿಳಿಸಿದರು.
ಪ್ರಾಥಮಿಕ ಶಾಲಾ ಶಿಕ್ಷಕರಿಂದ ಹಿಡಿದು ಸ್ನಾತಕೋತ್ತರ ಪದವಿ ಶಿಕ್ಷಕರ ವೃತ್ತಿಯು ಇತರ ಸೇವಾ ವೃತ್ತಿಗಳಿಗಿಂತ ಭಿನ್ನವಾದುದಾಗಿದೆ. ಅವರು ಯಂತ್ರ ಅಥವಾ ಫೈಲುಗಳೊಂದಿಗೆ ಕೆಲಸ ಮಾಡುತ್ತಿಲ್ಲ. ಬೋಧನೆ ಮತ್ತು ಬೋಧನಾ ಪೂರಕ ಚಟುವಟಿಕೆಗಳ ಮೂಲಕ ದೇಶದ ಮಾನವ ಸಂಪನ್ಮೂಲ ಅಭಿವೃದ್ಧಿಯ ಮಹತ್ವದ ಕಾರ್ಯವನ್ನು ಅವರು ನಿರ್ವಹಿಸುತ್ತಿzರೆ ಎಂದ ಅವರು ಶಿಕ್ಷಕ ವೃತ್ತಿಯನ್ನು ಭಿನ್ನವಾಗಿ ಪರಿಗಣಿಸಿ ಶಿಕ್ಷಕರ ಪ್ರತ್ಯೇಕ ಸೇವಾ ಅಧಿನಿಯಮದ ಕಾಯ್ದೆಯನ್ನು ರೂಪಿಸಬೇಕಾದ ಅಗತ್ಯವಿದೆ ಎಂದರು.
ಶಿಕ್ಷಕ ಸಮುದಾಯದ ಸಮಸ್ಯೆಗಳು ಪರಿಹಾರ ವಾಗದೆ ದಿನದಿಂದ ದಿನಕ್ಕೆ ಹೆಚ್ಚು ಸಂಕೀರ್ಣಗೊಂಡು ಜಟಿಲಗೊಳ್ಳುತ್ತಿದೆ. ಈ ಕಾರ್ಯವನ್ನು ಮಾಡಲು ಅವಕಾಶವಾಗುವಂತೆ ಜೂ.೩ರಂದು ನಡೆಯುವ ನೈಋತ್ಯ ಶಿಕ್ಷಕರ ಚುನಾವಣೆಯಲ್ಲಿ ನನಗೆ ತಮ್ಮ ಮೊದಲ ಪ್ರಾಶಸ್ತ್ಯದ ಮತವನ್ನು ನೀಡಿ ಚುನಾಯಿಸು ವಂತೆ ಈ ಮೂಲಕ ವಿನಂತಿ ಮಾಡಿಕೊಂಡಿzರೆ.