ತಾಜಾ ಸುದ್ದಿದೇಶ

ಹಿರೇಕಲ್ಮಠದಲ್ಲಿ ಬೇಡ ಜಂಗಮ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ

Share Below Link

ಹೊನ್ನಾಳಿ : ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ ಜಂಗಮ ಸಮಾಜ ದಿಂದ ೨೦೨೪- ೨೫ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾದ ಬೇಡ ಜಂಗಮ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ವನ್ನು ಜು.೨೦ರ ಭಾನುವಾರ ಬೆಳಿಗ್ಗೆ ೧೧ ಗಂಟೆಗೆ ಹೊನ್ನಾಳಿ ಶ್ರೀ ಚನ್ನಪ್ಪಸ್ವಾಮೀಜಿ ಹಿರೇಕಲ್ಮಠದಲ್ಲಿ ಹೊನ್ನಾಳಿ ತಾಲೂಕು ಬೇಡ ಜಂಗಮ ಸಮಾಜ ಸೇವಾ ಸಂಘದ ಅಧ್ಯಕ್ಷ ಬೈರನಹಳ್ಳಿ ಎಂ. ಪಂಚಾಕ್ಷರಯ್ಯ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಬೇಡ ಜಂಗಮ ಸಮಾಜ ಸೇವಾ ಸಂಘದ ಪ್ರದಾನ ಕಾರ್ಯದರ್ಶಿ ಡಾ.ಎಸ್. ರುದ್ರಸ್ವಾಮಿ ಕುಳಗಟ್ಟೆ ಹೇಳಿದರು.
ಹೊನ್ನಾಳಿ ತಾಲೂಕು ಬೇಡ ಜಂಗಮ ಸಮಾಜ ಸೇವಾ ಸಂಘದ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಜಂಗಮ ಸಮಾಜದ ಸರಕಾರಿ ನೌಕರರು, ನಿವೃತ್ತ ನೌಕರರಿಗೆ ಗುರುರಕ್ಷೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪೂಜ್ಯಶ್ರೀ ಡಾ.ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಕಡೇನಂದಿಹಳ್ಳಿ ಮಠದ ರೇವಣಸಿzಶ್ವರ ಶಿವಾರ್ಯ ಸ್ವಾಮೀಜಿ, ಗೋವಿನಕೋವಿ ಹಾಲಸ್ವಾಮೀಜಿ ಮಠದ ಸದ್ಗುರು ಶಿವಯೋಗಿ ವಿಶ್ವಾರಾಧ್ಯ ಮಹಾಲಿಂಗ ಹಾಲಸ್ವಾಮೀಜಿ , ರಾಂಪುರ ಹಾಲಸ್ವಾಮೀಜಿ ಮಠದ ಶಿವಕುಮಾರ ಸ್ವಾಮೀಜಿ , ಕತ್ತಿಗೆ ಮಠದ ಚನ್ನಪ್ಪಸ್ವಾಮೀಜಿ ಸಾನಿಧದಲ್ಲಿ ನಡೆಯುವ ಹೊನ್ನಾಳಿ ತಾಲೂಕು ಬೇಡ ಜಂಗಮ ಸಮಾಜ ಸೇವಾ ಸಂಘದ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಜಂಗಮ ಸಮಾಜದ ಸರಕಾರಿ ನೌಕರರು, ನಿವೃತ್ತ ನೌಕರರಿಗೆ ಗುರುರಕ್ಷೆ (೨ನೇ ಪುಟಕ್ಕೆ)