ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸೆ.೧೨ರಂದು ತಮಟೆ ಚಳವಳಿ: ಗುರುಮೂರ್ತಿ

Share Below Link

ಶಿವಮೊಗ್ಗ(ಹೊಸನಾವಿಕ): ಪರಿಶಿಷ್ಟ ಜತಿಯೊಳಗಿನ ಉಪ ಜತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ಧವಾದ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶ ವನ್ನು ರಾಜ್ಯ ಸರ್ಕಾರ ತಕ್ಷಣವೇ ಅನುಷ್ಠಾನಗೊಳಿಸಬೇ ಕೆಂದು ಆಗ್ರಹಿಸಿ ಸೆ.೧೨ರಂದು ಬೆಳಿಗ್ಗೆ ೧೧ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲದಲ್ಲಿ ಜಿಲ್ಲಾ ಧಿಕಾರಿಗಳ ಕಚೇರಿ ಆವರಣದಲ್ಲಿ ಬೃಹತ್ ತಮಟೆ ಚಳುವಳಿ ಮೂ ಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲ ಕ ಎಂ.ಗುರುಮೂರ್ತಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಒಳ ಮೀಸಲಾತಿ ಕುರಿತು ಇದ್ದ ಗೊಂದಲಗಳಿಗೆ ಸುಪ್ರೀಂಕೋರ್ಟ್ ಈಗ ತೆರೆ ಎಳೆ ದಿದೆ. ಸುಪ್ರೀಂಕೋರ್ಟ್ ಆದೇಶ ಬಂದು ಒಂದು ತಿಂಗಳು ಕಳೆದಿ ದ್ದರೂ ರಾಜ್ಯ ಸರ್ಕಾರ ಆದೇಶ ವನ್ನು ಅನುಷ್ಠಾನಗೊಳಿಸದೇ ನಿದ್ದೆ ಹೊಡೆಯುತ್ತಿದೆ. ಈ ನಿದ್ದೆ ಹೊಡೆ ಯುತ್ತಿರುವ ಸರ್ಕಾರವನ್ನು ಬಡಿ ದೆಬ್ಬಿಸಲು ಈ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಆ.೧ರಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾಗಿದೆ. ಈ ತೀರ್ಪನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ಆದೇಶಿಸಿರುವುದರಿಂದ ತಕ್ಷಣವೇ ಅನುಷ್ಠಾನ ಗೊಳಿಸ ಬೇಕು. ಡಿಎಸ್‌ಎಸ್‌ನ ಸಂಸ್ಥಾಪಕ ಪ್ರೊ. ಬಿ.ಕೃಷ್ಣಪ್ಪನವರ ಜನ್ಮ ದಿನವಾದ ಜೂ.೯ರಂದು ಸರ್ಕಾರಿ ಕಾರ್ಯಕ್ರಮ ವನ್ನಾಗಿ ಆಚರಿಸ ಬೇಕು ಹಾಗೂ ಪ್ರೊ.ಕೃಷ್ಣಪ್ಪ ನವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು. ಬಾಕಿ ಉಳಿದಿರುವ ಬ್ಯಾಕ್‌ಲ್ಯಾಗ್ ಹುದ್ದೆ ಗಳನ್ನು ಭರ್ತಿ ಮಾಡಬೇಕು. ಬಗರ್ ಹುಕುಂ ಸಾಗುವಳಿಯನ್ನು ಸಕ್ರಮ ಗೊಳಿಸಿ ಹಕ್ಕುಪತ್ರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾ ಯಿಸಲಾಗುವುದು ಎಂದರು.
ಪ್ರಮುಖರಾದ ಶಿವಬಸಪ್ಪ, ಚಂದ್ರಣ್ಣ ಜೋಗಿ, ಬಿ.ಎ.ಕಾಟ್ಟೆ, ಎಂ. ಏಳುಕೋಟಿ ಇನ್ನಿತರರಿ ದ್ದರು.

Leave a Reply

Your email address will not be published. Required fields are marked *