ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಮಕ್ಕಳಿಗೆ ಪಾಠ ಹೇಳಿಕೊಡುವುದು ಪುಣ್ಯದ ಕೆಲಸ …

Share Below Link

ಶಿವಮೊಗ್ಗ : ಮಕ್ಕಳಿಗೆ ಪಾಠ ಹೇಳಿಕೊಡುವುದು ಒಂದು ಪುಣ್ಯದ ಕೆಲಸ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.
ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಪ್ರಿಯದರ್ಶಿನಿ ಆಂಗ್ಲ ಪ್ರೌಢಶಾಲೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸ ಲಾಗಿದ್ದ ಬದಲಾದ ಪರೀಕ್ಷಾ ಪದ್ಧತಿ ಕುರಿತಾದ ಶೈಕ್ಷಣಿಕ ಕಾರ್ಯಾಗಾರ ವನ್ನು ಉದ್ಘಾಟಿಸಿ ಮಾತನಾಡಿದ ಅವರು,ಶಿಕ್ಷಣ ಮಂಡಳಿಯು ಮಕ್ಕಳಿಗೆ ಅವಕಾಶಗಳನ್ನು ನೀಡುವ ದೃಷ್ಠಿಯಿಂದ ಎಸ್‌ಎಸ್ ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ಮೂರು ಪ್ರಯತ್ನಗಳಲ್ಲಿ ನಡೆಸಲು ತೀರ್ಮಾನಿಸಿದೆ. ಒಂದೇ ಬಾರಿ ಮಾತ್ರ ಪರೀಕ್ಷಾ ಶುಲ್ಕವನ್ನು ಪಾವತಿಸಿ ೩ ಅವಕಾಶಗಳೊಂದಿಗೆ ಪರೀಕ್ಷೆಗಳನ್ನು ಬರೆಯಬಹುದಾ ಗಿದೆ. ಮೊದಲ ಪರೀಕ್ಷೆಯಲ್ಲಿಯೇ ಉತ್ತೀರ್ಣರಾದ ವಿದ್ಯಾರ್ಥಿಗಳು ಮುಂದಿನ ಎರಡು ಅವಕಾಶಗಳನ್ನು ಉಪಯೋಗಿಸಿಕೊಳ್ಳುವುದು ಅವರ ಐಚ್ಛಿಕ ವಿಷಯ. ಮೂರು ಪರೀಕ್ಷೆಗಳಲ್ಲಿ ಯಾವ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದಿ ರುತ್ತಾರೋ ಆ ಅಂಕವನ್ನು ಪರಿಗಣಿಸಲಾಗುತ್ತದೆ. ಮಕ್ಕಳ ಭವಿಷ್ಯವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಈ ಅವಕಾಶಗಳನ್ನು ಕಲ್ಪಿಸಲಾಗಿದೆ.


ಮಕ್ಕಳು ಯಾವುದೇ ಮಾಧ್ಯಮದಲ್ಲಿ ಓದುತ್ತಿದ್ದರೂ ಸಹ ಕಡ್ಡಾಯವಾಗಿ ಕನ್ನಡವನ್ನು ಓದಲೇಬೇಕು. ಶಿಕ್ಷಣವನ್ನು ಒಳ್ಳೆಯ ರೀತಿಯಲ್ಲಿ ತೆಗೆದು ಕೊಂಡು ಹೋಗುವ ದೃಷ್ಠಿಯಿಂದ ಮುಂದಿನ ವರ್ಷದಲ್ಲಿ ರಾಜ್ಯದಲ್ಲಿ ೫೦೦ ರಿಂದ ೬೦೦ ಕೆಪಿಎಸ್ ಶಾಲೆ ಗಳನ್ನು ತೆರೆಯಲು ನಿರ್ಧರಿಸಿದೆ. ಈ ಬಾರಿ ೪೩ ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂ ಡಿದ್ದು, ೧೩ ಸಾವಿರ ಖಾಯಂ ಶಿಕ್ಷಕ ರನ್ನು ನೇಮಕ ಮಾಡಲಾಗಿದ್ದು, ಶಾಲೆಗಳಲ್ಲಿನ ಸಮಸ್ಯೆ ಪರಿಹಾರಕ್ಕೆ ನಿಮ್ಮ ಸಹಕಾರ ನನಗೆ ಅಗತ್ಯ ಎಂದು ಹೇಳಿದರು.
ಡಿಡಿಪಿಐ ಸಿ.ಆರ್ ಪರಮೇಶ್ ಮಾತನಾಡಿ, ಎಸ್‌ಎಸ್‌ಎಲ್‌ಸಿ ಎನ್ನುವುದು ಪ್ರತಿ ವಿದ್ಯಾರ್ಥಿಯ ಜೀವನದ ಮುಖ್ಯ ಘಟ್ಟ. ವಿದ್ಯಾ ರ್ಥಿಗಳಲ್ಲಿ ಪರೀಕ್ಷಾ ಭಯವನ್ನು ಹೋಗಲಾಡಿಸಲು ಅತ್ಯುತ್ತಮ ವಾದ ಆಸಕ್ತಿಯನ್ನು ತುಂಬಬೇಕು. ಇಪ್ಪತ್ತೆರಡು ಸಾವಿರ ವಿದ್ಯಾರ್ಥಿಗಳ ಪೈಕಿ ನಾಲ್ಕು ಸಾವಿರ ವಿದ್ಯಾರ್ಥಿ ಗಳು ಸರಾಸರಿಗಿಂತ ಕಡಿಮೆ ಇzರೆ. ಅಂತಹ ವಿದ್ಯಾರ್ಥಿ ಗಳನ್ನು ಗುರುತಿಸಿ ಅವರಿಗೆ ಹೆಚ್ಚಿನ ಒತ್ತು ನೀಡಬೇಕು. ವಿಷಯವಾರು ಸಂಬಂಧಪಟ್ಟ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು. ಎ ವಿಷಯವಾರು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಹಾಜರಾತಿ ಬಹಳ ಮುಖ್ಯ. ಶಿಕ್ಷಕರು ಪೋಷಕರೊ ಂದಿಗೆ ಸಮಾಲೋಚನೆ ನಡೆಸ ಬೇಕು. ಸ್ಥಳೀಯ ಪರಿಸ್ಥಿತಿಯನ್ನು ಮನಗಂಡು ಪರೀಕ್ಷೆಗೆ ಬೇಕಾದ ಅಗತ್ಯ ತಯಾರಿಗಳನ್ನು ಮಾಡಿ ಕೊಳ್ಳಬೇಕು ಎಂದು ಹೇಳಿದರು.
ವಿಶೇಷ ಉಪನ್ಯಾಸಕರಾದ ಹರಿಪ್ರಸಾದ್ ಮಾತನಾಡಿ, ಬದಲಾದ ಪರೀಕ್ಷಾ ಪದ್ಧತಿಯನ್ನು ತುಂಬಾ ವೈಭವೀಕರಿಸಲಾಗಿದೆ. ಅದನ್ನು ಕಡಿಮೆ ಮಾಡಬೇಕು. ಮಕ್ಕಳ ಮೇಲಿನ ಒತ್ತಡವನ್ನು ನಿವಾರಣೆ ಮಾಡಬೇಕು ಮತ್ತು ಪರೀಕ್ಷೆಯನ್ನು ಸುಲಲಿತವಾಗಿ ಮಾಡಬೇಕು. ಇವುಗಳು ಬದಲಾದ ಪರೀಕ್ಷಾ ಪದ್ಧತಿಯ ಆಶಯಗಳು ಇವುಗಳನ್ನು ತಿಳಿಯುವುದು ಉತ್ತಮ. ಯಾವುದೇ ಪರೀಕ್ಷೆ ನಡೆಯುವಾಗ ಅದಕ್ಕೆ ಸಂಬಂಧ ಪಟ್ಟ ಬ್ಲ್ಯೂಪ್ರಿಂಟ್ ಮತ್ತು ಮಾದರಿ ಪ್ರಶ್ನೆ ಪತ್ರಿಕೆಯನ್ನು ಮಂಡಳಿಯು ತನ್ನ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡುತ್ತದೆ. ಶಿಕ್ಷಕರು ಅದನ್ನು ಗಮನಿಸಿ ಮಕ್ಕಳಿಗೆ ಸರಿಯಾದ ಕ್ರಮದಲ್ಲಿ ತಿಳಿಸಬೇಕು. ಮಕ್ಕಳು ಒಂದು ವಿಷಯದ ಆಳದ ಕಡೆಗೆ ಹೆಚ್ಚು ಗಮನ ಹರಿಸಬೇಕು ಮತ್ತು ಶೇ.೭೫ ಹಾಜರಾತಿಯನ್ನು ಹೊಂದಿರಬೇಕು ಎಂದು ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾರ್ಗ ದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಪ್ರೊಫೆಸರ್ ಚಂದ್ರಕಾಂತ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೃಷ್ಣಪ್ಪ, ಗ್ಲೋಬಲ್ ಎಜುಕೇಶನ್ ಸೊಸೈಟಿಯ ರಮೇಶ್, ಡಯೆಟ್ ಪ್ರಾಂಶುಪಾಲರಾದ ಬಸವ ರಾಜಪ್ಪ, ಕಲಗೋಡು ರತ್ನಾಕರ್ ಮತ್ತಿತರರು ಉಪಸ್ಥತರಿದ್ದರು.