ಸ್ವಾತಂತ್ರ್ಯ ಹೋರಾಟಗಾರರ ನೆನಪು ಜನಮಾನಸದಲ್ಲಿ ಚಿರಸ್ಥಾಯಿ : ಸಚಿವ ಮಧು
ಶಿವಮೊಗ್ಗ : ಜಿ ಅನೇಕ ಹೋರಾಟಗಾರರಿಗೆ ಜನ್ಮ ನೀಡಿದ್ದು ವಿಶೇಷವಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಈಸೂರಿನ ಸ್ವಾತಂತ್ರ್ಯ ಹೋರಾಟಗಾರರ ನೆನಪು ಜನರ ಮನಸ್ಸಿನಲ್ಲಿ ಇಂದಿಗೂ ಚಿರಸ್ಥಾಯಿ ಯಾಗಿದೆ ಎಂದು ಜಿ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸ್ಮರಿಸಿದರು.
ಜಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಇಂದು ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯ ಧ್ವಜರೋಹಣ ಕಾರ್ಯಕ್ರಮ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆ ಸಂದೇಶ ನೀಡಿದರು.

ಈ ಜಿ ಅನೇಕ ಹೋರಾಟ ಗಾರರಿಗೆ ಜನ್ಮ ನೀಡಿದೆ, ರಾಜ್ಯದ ರಾಜಕೀಯ ಕ್ಷೇತ್ರದಲ್ಲಿ ನಮ್ಮ ತಂದೆಯವರಾದ ಎಸ್. ಬಂಗಾರಪ್ಪನವರು ಸೇರಿದಂತೆ ನಾಲ್ಕು ಮುಖ್ಯ ಮಂತ್ರಿಗಳನ್ನು ನೀಡಿದ ಹಾಗೂ ರಾಷ್ಟ್ರ ಕವಿಗಳಾದ ಕುವೆಂಪು, ಜಿ.ಎಸ್. ಶಿವರುದ್ರಪ್ಪ ಮತ್ತು ಸಮಾಜವಾದಿ ಹೋರಾಟ ಗಾರರಾದ ಶಾಂತವೇರಿ ಗೋಪಾಲ ಗೌಡ ಸೇರಿದಂತೆ ಅನೇಕರು ಜನಿಸಿದ ಪುಣ್ಯಭೂಮಿ ಎಂದರು.
ನಮ್ಮ ಸರ್ಕಾರವು ಅತ್ಯಂತ ಜನಪ್ರಿಯ ಗ್ಯಾರಂಟಿ ಯೋಜನೆಗಳನ್ನು ಕಡಿಮೆ ಅವಧಿಯಲ್ಲಿ ಜರಿಗೊಳಿಸಿದೆ. ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜನರಿಗೆ ತಲುಪಿದ್ದು, ಜನರ ಜೀವನದಲ್ಲಿ ಸುಧಾರಣೆ ಕಾಣಬಹುದಾಗಿದೆ ಎಂದರು.
ಜಿಲ್ಲೆಯಾದ್ಯಂತ ಈ ಬಾರಿ ಉತ್ತಮ ಮಳೆಯಾಗಿದ್ದು, ಕೆರೆ, ಕಾಲುವೆಗಳಲ್ಲಿ ನೀರು ತುಂಬಿ, ಕೃಷಿ ಚಟುವಟಿಕೆಗೆ ಅನುಕೂಲವಾಗಿದೆ. ಇದರಿಂದಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ ಎಂದರಲ್ಲದೇ, ಜಿಗೆ ನೂತನವಾಗಿ ೫ ಪಶು ಚಿಕಿತ್ಸಾಲಯ ಕಟ್ಟಡಗಳನ್ನು ಮಂಜೂರು ಮಾಡಲಾಗಿದೆ. ಶೀಘ್ರದಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.
ಶಿರಾಳಕೊಪ್ಪ, ಅಮೃತ್ ಯೋಜನೆಯಡಿ ಶಿಕಾರಿಪುರ, ಹೊಳೆಹೊನ್ನೂರು, ಜೋಗ- ಕಾರ್ಗಲ್, ಹೊಸನಗರ, ತೀರ್ಥಹಳ್ಳಿ, ಆನವಟ್ಟಿ ಪಟ್ಟಣ ಪಂಚಾಯಿತಿ, ಪುರಸಭೆಗೆ ನೀರು ಸರಬರಾಜು ಕಲ್ಪಿಸುವ ಕಾಮಗಾರಿಗೆ ಶೀಘ್ರದಲ್ಲಿ ಚಾಲನೆ ದೊರೆಯಲಿದೆ ಎಂದರು.
ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಸೊರಬ ಹಾಗೂ ಭದ್ರಾವತಿ ವಿಧಾನಸಭಾ ಕ್ಷೇತ್ರಕ್ಕೆ ನೂತನ ನೀರಾವರಿ ಯೋಜನೆ ಮಂಜೂರು ಮಾಡ ಲಾಗಿದ್ದು, ಒಟ್ಟಾರೆ ರೂ.೩೦೭.೮೦ ಕೋಟಿ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಕುಂಸಿ – ಗಾಜನೂರು ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ರೂ.೧೨೫ ಕೋಟಿ ಅನುಮೊದನೆ ದೊರಕಿದ್ದು, ಕಾಮಗಾರಿಯು ಪ್ರಗತಿಯಲ್ಲಿರು ತ್ತದೆ ಎಂದರು.

ಇತ್ತೀಚಿನ ಎಸ್.ಎಸ್.ಎಲ್. ಸಿ. ಪರೀಕ್ಷಾ ಫಲಿತಾಂಶದಲ್ಲಿ ಶಿವಮೊಗ್ಗ ಜಿ ೪ನೇ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿದೆ ಹಾಗೂ ಶಿಕ್ಷಣ ಇಲಾಖೆಯಲ್ಲಿ ಕಡಿಮೆ ಅಂಕ ಪಡೆದ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಗಳನ್ನು ಕಲ್ಪಿಸಲು ಎಸ್.ಎಸ್. ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಮೂರು ಪರಿಕ್ಷಾ ನೀತಿ ಜರಿ ಗೊಳಿಸಲಾಗಿದೆ. ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣ ಗೊಳ್ಳದ ಎ ವಿದ್ಯಾರ್ಥಿಗಳಿಗೆ ೨ನೇ ಅಥವಾ ೩ನೇ ಪರೀಕ್ಷೆಗೆ ಶುಲ್ಕ ವಿನಾಯಿತಿ ನೀಡಲಾಗಿದೆ ಎಂದರು.
ಸರ್ಕಾರಿ ಪದವಿಪೂರ್ವ ಕಾಲೇಜುಗಳ ವಿeನ ವಿಭಾಗದ ೨೫೦೦೦ ಕ್ಕಿಂತ ಹೆಚ್ಚು ವಿದ್ಯಾರ್ಥಿ ಗಳಿಗೆ ಉಚಿತವಾಗಿ ಎನ್ಇಇಟಿ/ಜೆಇಇ/ಸಿಇಟಿ ತರಬೇತಿ ನೀಡಲಾ ಗುತ್ತಿದೆ. ಸದರಿ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡು ೨೦೨೪-೨೫ನೇ ಸಾಲಿನಲ್ಲಿ ಚಿಕ್ಕಬ ಳ್ಳಾಪುರ ಜಿಯ ಗೌರಿಬಿದನೂರು ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಯು ಐಐಟಿ ಖರಗುರ ಗೆ ಪ್ರವೇಶಾತಿ ಪಡೆದಿರುವುದು ಶಿಕ್ಷಣ ಸಚಿವನಾಗಿ ನನಗೆ ಹೆಮ್ಮಯ ವಿಷಯವಾಗಿದೆ ಎಂದರು.
ದೇಶದಲ್ಲೇ ಮೊದಲ ಬಾರಿಗೆ ಜಿ ಮಟ್ಟದಲ್ಲಿ ‘ಅಂಧತ್ವ ಮುಕ್ತ ಶಿವಮೊಗ್ಗ ಎಂಬ ಅಭಿಯಾನ ಕಾರ್ಯಕ್ರಮ ಅನುಷ್ಠಾನಗೊಳಿಸ ಲಾಗಿದೆ. ಮೆಗ್ಗಾನ್ ಆಸ್ಪತ್ರೆಯನ್ನು ಉನ್ನತೀಕರಿಸುವುದಲ್ಲದೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆಗಿ ಪರಿವರ್ತಿ ಸಲು ಉದ್ದೇಶಿಸಲಾಗಿದೆ. ಕಿದ್ವಾಯಿ ಮಾದರಿಯ ಕ್ಯಾನ್ಸರ್ ಆಸ್ಪತ್ರೆ ಕಾಮಗಾರಿ ಯು ಪ್ರಗತಿ ಯಲ್ಲಿದೆ ಎಂದರು.

ಜಿಯಲ್ಲಿ ಹಲವು ದಶಕಗ ಳಿಂದ ಇತ್ಯರ್ಥವಾಗದೆ ಉಳಿದಿದ್ದ ಶರಾವತಿ ಮುಳುಗಡೆ ಸಂತ್ರಸ್ಥರು ಹಾಗೂ ಬಗರ್ಹುಕುಂ ಸಾಗುವಳಿ ದಾರರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯರವರ ಮಾರ್ಗ ದರ್ಶನದಲ್ಲಿ, ಸಮಸ್ಯೆಯ ಶೀಘ್ರ ಪರಿಹಾರಕ್ಕೆ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಲು ಹಿರಿಯ ವಕೀ ಲರೊಬ್ಬರನ್ನು ನೇಮಿಸಲಾಗಿದೆ. ಕಾರ್ಮಿಕರಿಗೆ ವಿವಿಧ ಸೌಲಭ್ಯಗಳನ್ನು ನೀಡಲು ಸ್ಮಾರ್ಟ್ ಕಾರ್ಡ್ ವಿತರಿ ಸಲಾಗುತ್ತಿದೆ. ಭದ್ರಾವತಿಯಲ್ಲಿ ನೂತನ ಕಾರ್ಮಿಕರ ಸಮುದಾಯ ಭವನ ಮತ್ತು ಶಿವಮೊಗ್ಗದ ಹೊರ ವಲಯ ಸಿದ್ಧಿಪುರದಲ್ಲಿ ವಸತಿ ಕಟ್ಟಡ ನಿರ್ಮಿಸಲಾಗಿದೆ ಎಂದರು.
ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶ ದಿಂದ ಜೋಗ ದಲ್ಲಿ ಕೋಟ್ಯಾಂತರ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಗಳನ್ನು ಕೈಗೆತ್ತಿಕೊಳ್ಳ ಲಾಗಿದ್ದು ಅತೀ ಶೀಘ್ರದಲ್ಲಿ ಉದ್ಘಾಟನೆ ನಡೆಯ ಲಿದೆ. ಹಾಗೂ ನೂತನ ಜಿಡಳಿತ ಭವನ ನಿರ್ಮಾಣ, ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುತ್ತಿದೆ ಎಂದರು.

೨೯ ಕವಾಯಿತು ತುಕುಡಿಗಳು ಶಿಸ್ತು ಮತ್ತು ಆಕರ್ಷಕ ಪಥ ಸಂಚಲನ ನಡೆಸಿದರು. ವಿದ್ಯಾರ್ಥಿ ಗಳು ನಡೆಸಿಕೊಟ್ಟ ದೇಶಭಕ್ತಿ ಗೀತೆಗಳ ನೃತ್ಯ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಮುಜರಾ ಯಿ ಇಲಾಖೆಯಿಂದ ಸಾಂಕೇತಿಕ ವಾಗಿ ೫ ಜನ ಅರ್ಚಕರಿಗೆ ತಸ್ತಿಕ್ ಹಣವನ್ನು ನೀಡಲಾಯಿತು. ಎಸ್ ಎಸ್ ಎಲ್ ಸಿ ಯಲ್ಲಿ ೬೨೫ಕ್ಕೆ ೬೨೫ ಅಂಕ ಗಳಿಸಿದ ೬ ಮಕ್ಕಳಿಗೆ ವಿದ್ಯಾ ರ್ಥಿ ಗಳನ್ನು ಸನ್ಮಾನಿಸಲಾಯಿತು. ೮ ಜನ ಸರ್ಕಾರಿ ನೌಕಕರಿಗೆ ಸರ್ವೊ ತ್ತಮ ಪ್ರಶಸ್ತಿ ನೀಡಲಾಯಿತು. ಗೃಹ ಇಲಾಖೆಯ ವತಿಯಿಂದ ಸಿಎಂ ಪದಕ ಪಡೆದ ಗೃಹರಕ್ಷಕ ಎಸ್.ಟಿ ಆನಂದ್ ಅವರನ್ನು ಸನ್ಮಾನಿಸಲಾಯಿತು.
ಶಿಸ್ತಿನ ಕವಾಯಿತು ಪ್ರದರ್ಶಿಸಿದ ತುಕುಡಿಗಳಾದ ಎನ್ಸಿಸಿ ಕಸ್ತೂರಬಾ ಬಾಲಿಕಾ ಪ್ರೌಢಶಾಲೆ ಪ್ರಥಮ, ಮೊರಾರ್ಜಿ ದೇಸಾಯಿ ಬಾಲಕರ ವಸತಿ ಶಾಲೆ ಗಾಜನೂರು ದ್ವಿತೀಯ ಹಾಗೂ ಕಸ್ತೂರಬಾ ಬಾಲಕಿಯರ ಪ್ರೌಢಶಾ ಲೆ ವಿಭಾಗದ ಭಾರತ ಸೇವಾದಳಕ್ಕೆ ತೃತೀಯ ಬಹುಮಾನ ಪಡೆಯಿತು.
ಅತ್ಯುತ್ತಮ ಸಾಂಸ್ಕೃತಿಕ ನೃತ್ಯ ಪ್ರದರ್ಶಿಸಿದ ಮಾಚೇನಹಳ್ಳಿಯ ಪೊಲೀಸ್ ಪಬ್ಲಿಕ್ ಶಾಲೆಗೆ ಪ್ರಥಮ, ಗೋಪಾಳದ ನಂದನ ವಿದ್ಯಾ ಸಂಸ್ಥೆಗೆ ದ್ವಿತೀಯ, ಬಹುಮಾನ ಹಾಗೂ ಗೋಪಾಳದ ಅನನ್ಯ ಪ್ರೌಢಶಾಲೆಗೆ ತೃತೀಯ ಸ್ಥಾನ ಘೋಷಿಸಿ ಬಹುಮಾನ ನೀಡಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಬಲ್ಕೀಶ್ ಬಾನು, ಡಾ.ಧನಂಜಯ ಸರ್ಜಿ, ಜಿಧಿಕಾರಿ ಗುರುದತ್ತ ಹೆಗಡೆ, ಜಿ.ಪಂ. ಸಿಇಓ ಹೇಮಂತ್, ಜಿ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಮಹಾ ನಗರಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ಇನ್ನಿತರರಿದ್ದರು.
