ಕೃಷಿ ವಿದ್ಯಾರ್ಥಿಗಳ ಪಾತ್ರ ಶ್ಲಾಘನೀಯ…
ಶಿಕಾರಿಪುರ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿeನಗಳ ವಿವಿಯಿಂದ ಚುರ್ಚಿಗುಂಡಿ ಗ್ರಾಮದಲ್ಲಿ ಏರ್ಪಡಿಸಿದ್ದ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ ನಿಮಿತ್ತ ಕೃಷಿ ವಸ್ತು ಪ್ರದರ್ಶನವನ್ನು ಯಶಸ್ವಿಯಾಗಿ ನಡೆಯಿತು.
ವಸ್ತುಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಶಾಸಕ ಬಿ.ವೈ. ವಿಜಯೇಂದ್ರ, ರೈತರಿಗೆ ತಂತ್ರeನದ ಬೆಳಕನ್ನು ಚೆಲ್ಲುವಲ್ಲಿ ಕೃಷಿ ವಿದ್ಯಾರ್ಥಿಗಳು ವಹಿಸುತ್ತಿರುವ ಪಾತ್ರ ಶ್ಲಾಘನೀಯ ಎಂದರು.
ರೈತರು ಎದುರಿಸುತ್ತಿರುವ ವಿವಿಧ ಸಂಕಷ್ಟಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೃಷಿ ವಿವಿ ಕಾರ್ಯನಿರ್ವಹಿಸಬೇಕು. ಆಗ ಮಾತ್ರ ಕೃಷಿ ವಿವಿ ಸ್ಥಾಪನೆಯ ಉzಶ ಸಾರ್ಥಕವಾಗುತ್ತದೆ ಎಂದರು.

ಕೃಷಿಕ ಸಮಾಜದ ರಾಜ್ಯ ಘಟಕ ಅಧ್ಯಕ್ಷ ನಗರದ ಮಹದೇವಪ್ಪ ಮಾತನಾಡಿ, ಈ ಕೃಷಿ ವಸ್ತು ಪ್ರದರ್ಶನವು ಕೇವಲ ವಿದ್ಯಾರ್ಥಿಗಳ ಕಾರ್ಯಕ್ರಮವಲ್ಲ, ಇದು ನೇರವಾಗಿ ರೈತರಿಗೆ ಸಂಬಂಧಿಸಿದ ಮಹತ್ವದ ಕಾರ್ಯಕ್ರಮವಾಗಿದೆ ಎಂದರು.
ಕೃಷಿ ವಿವಿ ಕುಲಪತಿ ಡಾ. ಆರ್.ಸಿ. ಜಗದೀಶ್ ಮಾತನಾಡಿ, ವಿದ್ಯಾರ್ಥಿಗಳ ಕೃಷಿ ಕಾರ್ಯಾನುಭವದ ಅಂಗವಾಗಿ ಆಯೋಜಿಸಿರುವ ಈ ಕೃಷಿ ವಸ್ತು ಪ್ರದರ್ಶನ ಅತ್ಯಂತ ಶ್ಲಾಘನೀಯ ವಾಗಿದ್ದು, ರೈತರ ಭಾರೀ ಪಾಲ್ಗೊಳ್ಳುವಿಕೆಯೇ ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾಗಿದೆ ಎಂದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಹಳ್ಳಿಕಾರ್ ಒಡೆಯ ವರ್ತೂರು ಸಂತೋಷ್, ವಿದ್ಯಾರ್ಥಿಗಳು ರೈತರ ಹೊಲಗಳಲ್ಲಿ ನಡೆಸಿದ ಪ್ರಾತ್ಯಕ್ಷಿಕೆಗಳು, ಗುಂಪುಚರ್ಚೆಗಳು ಹಾಗೂ ಜಗೃತಿ ಕಾರ್ಯಕ್ರಮಗಳ ಬಗ್ಗೆ ತಿಳಿದು ಸಂತಸ ವ್ಯಕ್ತಪಡಿಸಿದರು.
ಚುರ್ಚಿಗುಂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ರಾಘವೇಂದ್ರ ಅಧ್ಯಕ್ಷತೆ ವಹಿಸಿದ್ದರು.
ವಿವಿ ಶಿಕ್ಷಣ ನಿರ್ದೇಶಕರಾದ ಡಾ. ಬಿ ಹೇಮ್ಲಾ ನಾಯಕ್, ಪ್ರಮುಖರಾದ ಹುಲ್ಮಾರ್ ಮಹೇಶ್, ಕಿರಣ್ ಕುಮಾರ್ ಹರ್ತಿ, ರುದ್ರೇಗೌಡ, ಸುರೇಶ ಗುಡ್ಡಳ್ಳಿ, ಬಿ.ಎಮ್ ಪಾಲಕ್ಶಪ್ಪ, ಎಸ್‌ಟಿ ವೀರೇಶ್ ,ಎಸ್ ಶಶಿಧರ್, ಪರಮೇಶ್ವರಪ್ಪ ಹಾಗೂ ಇನ್ನಿತರು ಉಪಸ್ಥಿತರಿದ್ದರು.
