ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಹಿಂದೂ ವಿರೋಧಿ ನಿಲುವಿನ ವಿರುದ್ಧ ಸಿಡಿದೆದ್ದ ವಿಶ್ವ ಹಿಂದೂ ಪರಿಷದ್…

Share Below Link

ಶಿವಮೊಗ್ಗ: ರಾಜ್ಯದಲ್ಲಿ ಈ ಹಿಂದೆ ಜರಿಯಲ್ಲಿದ್ದ ಮತಾಂತರ ನಿಷೇಧ ಕಾನೂನನ್ನು ರಾಜ್ಯ ಸರ್ಕಾರ ಹಿಂಪಡೆಯಲು ತೀರ್ಮಾ ನಿಸಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಶಾಖೆ ವತಿಯಿಂದ ಇಂದು ಗೋಪಿ ವೃತ್ತ ದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಬಂದು ಡಿಸಿ ಕಚೇರಿ ಯಲ್ಲಿ ಸಭೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಸಭೆಯಲ್ಲಿ ಮಾತನಾಡಿದ ವಿಹಿಂಪ ಜಿಲ್ಲಾಧ್ಯಕ್ಷ ಜೆ.ಆರ್. ವಾಸುದೇವ್, ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ನಿರ್ಧಾರವನ್ನು ಸರ್ಕಾರ ಕೂಡಲೇ ಕೈ ಬೀಡ ಬೇಕೆಂದು ಆಗ್ರಹಿಸಿದರು.
ಭಾರತವು ಹಿಂದೂ ರಾಷ್ಟ್ರ ವಾಗಿದ್ದು ಇಲ್ಲಿ ಹಿಂದುಗಳೊಡನೆ ಅನ್ಯಧರ್ಮೀಯರೂ ಸಹ ಸಹಬಾಳ್ವೆ ಮಾಡಲು ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಅದ ರಂತೆ ಕರ್ನಾಟಕದಲ್ಲೂ ಸಹ ಹಿಂದೂಗಳೊಡನೆ ಅನ್ಯಧರ್ಮೀ ಯರೂ ತಮ್ಮ ಧರ್ಮ-ಮತಾ ಚರಣೆ ಮಾಡಲು ಅವಕಾಶವಿದೆ. ಇದನ್ನು ನಾವು ಒಪ್ಪುತ್ತೇವೆ ಮತ್ತು ಪ್ರಶ್ನಿಸುವುದಿಲ್ಲ. ಆದರೆ ಹಿಂದೂ ಗಳಿಗೆ ಆಮಿಷ ತೋರಿಸಿ ಅಥವಾ ಹೆದರಿಸಿ ಬಲವಂತವಾಗಿ ಮತಾಂತ ರಿಸುವುದನ್ನು ಅಥವಾ ಮರುಳು ಮಾಡಿ ಮತಾಂತರಿಸುವುದನ್ನು ನಾವು ಖಂಡಿಸುತ್ತೇವೆ ಎಂದರು.
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮಾತನಾಡಿ, ಮತಾಂತರ ಹಾಗೂ ಗೋ ಹತ್ಯೆಯಂತಹ ಕಾಯ್ದೆಗಳನ್ನು ರದ್ದು ಮಾಡಲು ಸರ್ಕಾರ ಮುಂದಾಗಿರುವುದು ದೇಶಕ್ಕೆ ಮಾಡಿದ ಅಪಮಾನವಾಗಿದೆ. ಭಾರತವು ಹಿಂದೂ ರಾಷ್ಟ್ರವಾಗಿದೆ ಮತ್ತು ಕರ್ನಾಟಕವು ಭಾರತದ್ದೇ ಒಂದು ಭಾಗವಾಗಿದೆ. ಇಲ್ಲಿನ ಹಿಂದೂಗಳನ್ನು ಮತಾಂತರದಿಂದ ರಕ್ಷಿಸಿ ನಮ್ಮ ಧರ್ಮವನ್ನು ಕಾಪಾ ಡುವುದು ಪ್ರತಿಯೊಬ್ಬ ಹಿಂದುವಿನ ಕರ್ತವ್ಯವಾಗಿದೆ ಎಂದರು.
ಶಾಸಕ ಎಸ್.ಎನ್.ಚನಬಸಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರಕ್ಕೆ ಅನ್ಯಧರ್ಮೀಯರಲ್ಲದೆ ಅತಿ ಸಂಖ್ಯೆಯಲ್ಲಿ ಹಿಂದೂಗಳೂ ಸಹ ಮತ ಹಾಕಿದ್ದು, ಅವರ ಮತ ದಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆಯೇ ಹೊರತು ಕೇವಲ ಅಲ್ಪಸಂಖ್ಯಾತರಿಂದಲ್ಲ. ಇದು ಕಾಂಗ್ರೆಸ್ ತನಗೆ ಮತ ನೀಡಿದ ಸಮಸ್ತ ಹಿಂದೂ ಸಮಾಜಕ್ಕೆ ದ್ರೋಹ ಬಗೆದಂತಾಗಿದೆ. ಕರ್ನಾಟಕದ ಹಿಂದುಗಳು ಇದನ್ನು ಖಂಡಿಸುವುದರೊಂದಿಗೆ ಮಂತ್ರಿ ಮಂಡಲವು ತಾನು ತೆಗೆದುಕೊಂ ಡಿರುವ ನಿರ್ಧಾರವನ್ನು ಕೂಡಲೇ ಹಿಂತೆದುಕೊಳ್ಳಬೇಕೆಂದು ಆಗ್ರಹಿ ಸಿದರು.
ಈ ಹಿಂದಿನ ಸರ್ಕಾರವು ಶಾಲಾ ಪಠ್ಯದಲ್ಲಿ ರಾಷ್ಟ್ರಪುರುಷರ ಪರಿಚಯವನ್ನು ಸೇರಿಸಿದ್ದನ್ನೂ ಸಹ ಸಂಕುಚಿತ ಭಾವನೆಯಿಂದ ಮತ್ತು ಅಲ್ಪಸಂಖ್ಯಾತರನ್ನು ತುಷ್ಟೀಕರಿ ಸುವ ಸಲುವಾಗಿ ಸಾವರ್ಕರ್ ರವರಂತಹ ಅಪ್ರತಿಮ ದೇಶಭಕ್ತರ ಪರಿಚಯದ ಪಾಠಗಳನ್ನು ತೆಗೆಯಲು ನಿರ್ಧರಿಸುವುದನ್ನೂ ಮನವಿಯಲ್ಲಿ ಖಂಡಿಸಲಾಗಿದೆ.
ಪ್ರತಿಭಟನೆಯಲ್ಲಿ ಪ್ರಮುಖ ರಾದ ಪಟ್ಟಾಭಿರಾಮ್, ಎಸ್. ರುದ್ರೇಗೌಡ, ಶಿವಕುಮಾರ್, ಲಕ್ಷ್ಮೀ ಶಂಕರ ನಾಯಕ್, ಆರ್.ಕೆ. ಸಿದ್ದರಾಮಣ್ಣ, ನಟರಾಜ್ ಭಾಗವತ್, ಗಿರೀಶ್ ಕಾರಂತ್, ಜಗದೀಶ್, ಈ.ವಿಶ್ವಾಸ್, ತಮ್ಡಿಹಳ್ಳಿ ನಾಗರಾಜ್, ಗಿರೀಶ್ ಪಟೇಲ್, ರಾಜೇಶ್ ಗೌಡ, ದೀನದಯಾಳ್, ನಾರಾಯಣ ವರ್ಣೇಕರ್, ಬಿ.ವೈ. ರಂಗನಾಥ್, ಲೋಕೇಶ್ವರ್ ಕಾಳೆ, ಬಳ್ಳೆಕೆರೆ ಸಂತೋಷ್ ಮೊದಲಾದವರು ಭಾಗವಹಿಸಿ ದ್ದರು.