ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಕಾಂಗ್ರೆಸ್ ಸರ್ಕಾರ ಬೀಳಿಸಿ ಬಿಜೆಪಿ ಅಧಿಕಾರಕ್ಕೆ ಬರುವುದರಲ್ಲಿ ತಪ್ಪೇನಿದೆ: ಈಶ್ವರಪ್ಪ

Share Below Link

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ ವನ್ನು ಬಿಜೆಪಿ ಏಕೆ ಬೀಳಿಸಬಾರದು, ಇದರಲ್ಲಿ ತಪ್ಪೇನಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಕುಟುಕಿದರು.


ಸುದ್ದಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಸರ್ಕಾರವಾಗಿದೆ ಜನಪರವಾಗಿ ಕೆಲಸ ಮಾಡುತ್ತಿಲ್ಲ. ಭ್ರಷ್ಟಾಚಾರ ತಲೆ ಎತ್ತಿದೆ. ವಿದ್ಯುತ್ ಕೊರತೆ ತಲೆದೋರಿದೆ. ರೈತರು, ಕಾರ್ಮಿ ಕರು ನಿರಾಶರಾಗಿ ದ್ದಾರೆ. ಹಣ ಕೊಟ್ಟರೂ ವಿದ್ಯುತ್ ಇಲ್ಲ, ಇನ್ನು ಉಚಿತ ಭಾಗ್ಯ ಎಲ್ಲಿಂದ ಬಂತು ಪರಿಸ್ಥಿತಿಯನ್ನು ಗಮನದಲ್ಲಿಟ್ಟು ಕೊಂಡು ವಿದ್ಯುತ್ ಖರೀದಿ ಮಾಡ ಬೇಕಿತ್ತು. ರಾಜ್ಯದ ಅಭಿವೃದ್ಧಿ ಮೊದಲೇ ಇಲ್ಲ. ಇಂತಹ ಸರ್ಕಾ ರವನ್ನು ಇನ್ನೂ ಉಳಿಸಬೇಕೆ ಎಂದು ಪ್ರಶ್ನೆ ಮಾಡಿದರು.
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಸಾಮ್ರಾಜ್ಯವೇ ಇಲ್ಲಿದೆ. ಅದರಲ್ಲೂ ಡಿ.ಕೆ. ಶಿವ ಕುಮಾರ್ ಅಕ್ರಮ ಹಣ ಸಂಪಾ ದನೆ ಮಾಡಿದ್ದಾರೆ ಎಂದು ಇಡೀ ದೇಶಕ್ಕೆ ಗೊತ್ತಿದೆ. ಜೈಲಿನಲ್ಲಿದ್ದು ಬೇಲ್ ಮೇಲೆ ಹೊರಗೆ ಬಂದ ವರು. ಕೇಸ್ ನಡೆಯುತ್ತಾ ಇದೆ, ಅವರ ಮೇಲಿನ ವಿಚಾರಣೆ ಮತ್ತೆ ಮುಂದುವರಿದಿದೆ. ಅವನೇನು ಸತ್ಯ ಹರಿಶ್ಚಂದ್ರ ಅಲ್ಲ. ಮತ್ತೆ ಜೈಲಿಗೆ ಹೋಗಿಯೇ ಹೋಗು ತ್ತಾನೆ ಎಂದು ಕುಟುಕಿದರು.
ಬಿಜೆಪಿ ಎಲ್ಲಾ ಭ್ರಷ್ಟಾಚಾರ ವನ್ನು ಸಹಿಸಿಕೊಂಡು ಸುಮ್ಮನಿ ರುವ ವಿರೋಧ ಪಕ್ಷವಲ್ಲ. ಇತ್ತೀ ಚೆಗೆ ಇಡಿ ದಾಳಿಯಲ್ಲಿ ಎರಡು ಕಡೆ ಕೋಟ್ಯಂತರ ರೂ. ನಗದು ಸಿಕ್ಕಿದೆ. ಇದು ಎಲ್ಲಿಂದ ಬಂತು ಎಂದು ಕೇಳಬಾರದೆ. ನಮಗೆ ಅನುಮಾನ ಇದೆ. ಈ ಹಣ ಪಂಚ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಬಳಕೆ ಮಾಡಲು ಸಂಗ್ರಹಿಸಿತ್ತು ಎಂದು ನಾವು ಆರೋಪ ಮಾಡುತ್ತೇವೆ. ಇವರು ಸತ್ಯವಂತರಾದರೆ ಆಯಿತು ಹಣ ಸಿಕ್ಕಿದೆ. ನಾವು ಸಿಬಿಐ ತನಿಖೆ ಮಾಡಿಸುತ್ತೇವೆ ಎಂದು ಏಕೆ ಹೇಳುತ್ತಿಲ್ಲ. ಹಾಗಾದರೆ ನಮ್ಮ ಅನುಮಾನ ನಿಜವಲ್ಲವೇ. ಇಂತಹ ಸರ್ಕಾರ ನಮಗೆ ಬೇಕಾ. ನಾವು ನೇರವಾಗಿ ಹೇಳುತ್ತೇವೆ. ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ನಗರಾಧ್ಯಕ್ಷ ಜಗದೀಶ್, ಪಾಲಿಕೆ ಸದಸ್ಯ ಜನೇಶ್ವರ್, ಬಾಲು, ಶಶಿಧರ್, ಅಣ್ಣಪ್ಪ ಕೆ.ವಿ. ಮೊದಲಾದವರು ಇದ್ದರು.