ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಈ ಬಾರಿ ೧೩೦ಕ್ಕೂ ಹೆಚ್ಚು ಸೀಟು ಪಡೆದು ಬಿಜೆಪಿಗೆ ಅಧಿಕಾರದ ಗದ್ದುಗೆ ಏರಲಿದೆ: ಬಿಎಸ್‌ವೈ

Share Below Link

ಶಿವಮೊಗ್ಗ: ೧೩೦ರಿಂದ ೧೪೦ರವರೆಗೆ ಸೀಟು ಪಡೆದು ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.
ಅವರು ಇಂದು ಶಿವಮೊಗ್ಗದ ತಮ್ಮ ನಿವಾಸದಲ್ಲಿ ವೀರಶೈವ ಮುಖಂಡರ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ೧೦೦ಕ್ಕೆ ೯೦ ಭಾಗ ವೀರಶೈ ವರು ಬಿಜೆಪಿಯನ್ನು ಬೆಂಬಲಿಸುತ್ತಿzರೆ. ಹಾಗೆಯೇ ೧೦೦ಕ್ಕೆ ೧೦೦ರಷ್ಟು ಶಿವಮೊಗ್ಗ ದಲ್ಲಿ ಬಿಜೆಪಿ ಗೆಲ್ಲುತ್ತದೆ. ಚುನಾವಣಾ ಪ್ರಚಾರ ಈಗಾಗಲೇ ಆರಂಭವಾಗಿದೆ. ಇಡೀ ರಾಜ್ಯದಲ್ಲಿ ಬಿಜೆಪಿಗೆ ಒಳ್ಳೆಯ ವಾತಾವರಣವಿದೆ ಎಂದರು.
ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ದಂತೆ ಕೇಂದ್ರದ ಮತ್ತು ವಿವಿಧ ರಾಜ್ಯಗಳ ಬಿಜೆಪಿ ಮುಖಂಡರು ರಾಜ್ಯಕ್ಕೆ ಚುನಾವಣಾ ಪ್ರಚಾರಕ್ಕಾಗಿ ಬರಲಿzರೆ. ನಾನು ಕೂಡ ಈಗಾಗಲೇ ಪ್ರಚಾರ ಆರಂಭಿಸಿದ್ದೇನೆ. ಕೊನೆಯ ಎರಡು ದಿನಗಳು ಇರುವಾಗ ಶಿವಮೊಗ್ಗದಲ್ಲಿ ಪ್ರಚಾರಕೈಗೊಳ್ಳುವೆ ಎಂದರು.
ಬಿ.ಎಲ್. ಸಂತೋಷ್ ಬಗ್ಗೆಯೂ ಕೂಡ ಆರೋಪಗಳು ಕೇಳಿಬರುತ್ತಿವೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಿ.ಎಲ್. ಸಂತೋಷ್ ನಮ್ಮ ನಾಯಕರು. ಅವರ ಬಗ್ಗೆ ಹಗುರವಾಗಿ ಮಾತನಾಡಿದರೆ ಸಹಿಸಲು ಸಾಧ್ಯವಿಲ್ಲ. ಅವರನ್ನು ಟೀಕೆ ಮಾಡುವ ಯೋಗ್ಯತೆ ಕೂಡ ಯಾರಿಗೂ ಇಲ್ಲ. ಸಂಘಟನೆಗಾಗಿ ಅವರು ಕೆಲಸ ಮಾಡುತ್ತಿzರೆ ಎಂದರು.
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮಾತನಾಡಿ, ರಾಹುಲ್ ಗಾಂಧಿಯವರು ಶಿವಮೊಗ್ಗಕ್ಕೆ ಬಂದರೆ ಬಿಜೆಪಿ ಅಭ್ಯರ್ಥಿಯ ಗೆಲುವಿನ ಅಂತರ ಮತ್ತಷ್ಟು ಹೆಚ್ಚಾಗುತ್ತದೆ. ಏಕೆಂದರೆ ಅವರು ಹೋದ ಕಡೆಯ ಕಾಂಗ್ರೆಸ್ ಸೋತಿದೆ. ಅವರು ಶಿವಮೊಗ್ಗಕ್ಕೂ ಬರಲಿ ಎಂಬುದು ನಮ್ಮ ಆಸೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಪರ ಮತ ಪ್ರಚಾರ ಜೋರಾಗಿ ನಡೆಯುತ್ತಿದೆ ಎಂದು ಯಡಿಯೂರಪ್ಪನವರೇ ಹೇಳಿzರಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಹಾಗೇನಿಲ್ಲ ಕಾಂಗ್ರೆಸ್‌ನವರಿಗೆ ಶಿವಮೆಗ್ಗದಲ್ಲಿ ಕಾರ್ಯಕರ್ತರೇ ಇಲ್ಲ. ಈಗ ಮನೆಮನೆಗೆ ತೆರಳಿ ಪ್ರಚಾರ ಮಾಡುತ್ತಿ ರುವವವರು ಅಭ್ಯರ್ಥಿಯ ನೆಂಟರೇ ಆಗಿzರೆ. ಬೇರೆ ಬೇರೆ ಕಡೆಯಿಂದ ಅವರು ಸಂಬಂಧಿಕರನ್ನೆಲ್ಲ ಕರೆಸಿ ಕರಪತ್ರ ಹಂಚುತ್ತಿzರೆ ಅಷ್ಟೆ ಎಂದರು.
ನಾಳೆಯಿಂದ ಮೇ ೭ರವರೆಗೆ ನಾನು ರಾಜ್ಯ ಪ್ರವಾಸ ಮಾಡುತ್ತೇನೆ. ನಡುನಡುವೆ ಶಿವಮೊಗ್ಗದಲ್ಲೂ ಇರುತ್ತೇನೆ. ರಾಜ್ಯಕ್ಕೆ ಪ್ರಧಾನಿ ನರೆಂದ್ರ ಮೋದಿ, ಅಮಿತ್ ಶಾ, ನಡ್ಡಾ ಸೇರಿದಂತೆ ಎಲ್ಲರೂ ಬರುತ್ತಾರೆ. ಕಳೆದ ಬಾರಿ ೪೬ ಸಾವಿರ ಮತಗಳ ಅಂತರದಿಂದ ಗೆದ್ದಿದ್ದೇವೆ. ಈ ಬಾರಿ ಬಿಜೆಪಿ ಅಭ್ಯರ್ಥಿ ೬೦ ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದರು.
ಕಾಂಗ್ರೆಸ್ ಕೇವಲ ಮುಸ್ಲಿಂ ಸಮುದಾ ಯದ ಮತ ನೆಚ್ಚಿಕೊಂಡಿದೆ. ರಾಷ್ಟ್ರವಾದಿ ಮುಸ್ಲಿಮರು ಎಂದೂ ಬಿಜೆಪಿ ಕೈ ಬಿಡಲ್ಲ. ಸಾವಿರಾರು ಮುಸ್ಲಿಮರಿಗೆ ನಾವು ಕೆಲಸ ಮಾಡಿಕೊಟ್ಟಿದ್ದೇವೆ ಎಂದು ಹೇಳಿದರು.
ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ಅಭ್ಯರ್ಥಿ ಎಸ್.ಎನ್.ಚನ್ನಬಸಪ್ಪ, ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್ .ಎಸ್.ಜ್ಯೋತಿಪ್ರಕಾಶ್, ಪ್ರಮುಖರಾದ ಡಾ.ಧನಂಜಯ ಸರ್ಜಿ, ಬಳ್ಳೇಕೆರೆ ಸಂತೋಷ್, ಎಸ್.eನೇಶ್ವರ್ ಮುಂತಾದವರಿದ್ದರು.