ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಈ ಬಾರಿ ಗೆಲುವು ನನ್ನದೇ: ಗೀತಾ ಶಿವರಾಜ್

Share Below Link

ಶಿವಮೊಗ್ಗ: ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಬದಲಾವಣೆ ತರಲು ಕಾಂಗ್ರೆಸ್ ಪಕ್ಷದತ್ತ ಜನರು ಒಲವು ತೋರುತ್ತಿದ್ದಾರೆ. ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ನನ್ನ ಗೆಲವು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಭರವಸೆ ವ್ಯಕ್ತಪಡಿಸಿದರು.
ಶಿಕಾರಿಪುರ ತಾಲ್ಲೂಕಿನ ತೊಗರ್ಸಿ, ಹರಗಿ, ಚಿಕ್ಕ ಮಾಗಡಿ ಗ್ರಾಪಂ ವ್ಯಾಪ್ತಿಯಲ್ಲಿ ಇಂದು ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ ಕುಮಾರ್ ಪರ ಮತಯಾಚನೆ ಸಭೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಗಳಿಂದ ಬಡ ಕುಟುಂಬದ ಮಹಿಳೆಯರು, ಅಶಕ್ತ ಕುಟುಂಬಗಳು ಸುಂದರ ಬದುಕು ಕಟ್ಟಿಕೊಂಡಿದ್ದಾರೆ. ಇಲ್ಲಿ ಗ್ಯಾರಂಟಿ ಭಾಗ್ಯಗಳು ಎಲ್ಲಾ ಧರ್ಮ, ಸಮುದಾಯಗಳ ಜನಮನ ಗೆದ್ದಿವೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಅವರ ಕನಸು ನನಸಾಗಿದೆ ಎಂದರು.
ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರಿಗೆ ತಾಲ್ಲೂಕಿನ ಜನ ಪ್ರೀತಿಯಿಂದ ಕಾಣುತ್ತಿದ್ದರು. ಅವರ ಜನಪರ ಸೇವೆಯನ್ನು ಮುಂದುವರೆಸಲು ನನಗೂ ಅವಕಾಶ ಕಲ್ಪಿಸಿಕೊಡಿ ಎಂದು ಕೋರಿದರು.
ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ, ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಕಟುಂಬ ಈ ಭಾಗದಲ್ಲಿ ಯಾವುದೇ ನಾಯಕರನ್ನು ಬೆಳೆಯಲು ಬಿಡಲಿಲ್ಲ. ಕಳೆದ ೪೦ ವರ್ಷಗಳಿಂದ ಈ ಭಾಗದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯ ಮಾಡಿಕೊಂಡು ಬರಲಾಗುತ್ತಿದೆ. ಇದು ಯಡಿಯೂರಪ್ಪ ಕುಟುಂಬ ಸದಸ್ಯರ ಸಾಧನೆ ಎಂದು ವ್ಯಂಗ್ಯವಾಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಾಗರಾಜ ಗೌಡ ಮಾತನಾಡಿ, ಬಗರ್ ಹುಕುಂ ಸಮಸ್ಯೆ ಸೇರಿದಂತೆ ಅನೇಕ ಬಗೆಹರಿಸ ಬಹುದಾದ ಸವಾಲುಗಳು ಇಲ್ಲಿವೆ. ಆದರೆ, ಸಂಸದ ಬಿ.ವೈ. ರಾಘವೇಂದ್ರ ಅವರು ಈ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ಕಳೆದ ೧೫ ವರ್ಷದಿಂದ ಇಲ್ಲಿ ಸಂಸದರಾಗಿ ಆಡಳಿತ ನಡೆಸುತ್ತಿದ್ದಾರೆ. ಆದರೆ, ರೈತಾಪಿ ವರ್ಗಕ್ಕೆ ನ್ಯಾಯ ಕೊಡಿಸಲು ಸಾಧ್ಯವಾಗಿಲ್ಲ ಎಂದು ದೂರಿದರು.
ಪ್ರಮುಖರಾದ ಅನಿಲ್ ಕುಮಾರ್ ತಡಕಲ್, ನಟ ಶಿವರಾಜಕುಮಾರ್
ಗೋಣಿ ಮಾಲತೇಶ್, ನಗರದ ಮಹದೇವಪ್ಪ ಇನ್ನಿತರರಿದ್ದರು.