ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಚಿಂತೆಯಿಂದ ಹೊರಬರಲು ಅನ್ನದಾಸೋಹದಂತಹ ಸೇವಾ ಕಾರ್ಯ ಅಗತ್ಯ…

Share Below Link

ಶಿವಮೊಗ್ಗ : ಮನುಷ್ಯ ಜೀವನದಲ್ಲಿ ಸದಾ ಚಿಂತೆಯ ಮುಳುಗಿರುತ್ತಾನೆ. ಅದರಿಂದ ಹೊರಗೆ ಬರಬೇಕಾದರೆ ಅನ್ನದಾಸೋಹದಂತಹ ಸೇವೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ| ಧನಂಜಯ ಸರ್ಜಿ ಕರೆ ನೀಡಿದರು.
ಮೆಗ್ಗಾನ್ ಬೋಧನಾ ಆಸ್ಪತ್ರೆಯ ಆವರಣದಲ್ಲಿಂದಎ ನವ್ಯಶ್ರೀ ಈಶ್ವರವನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರೋಗಿಗಳು ಮತ್ತು ಸಂಬಂಧಿಕರಿಗೆ ವಾರದಲ್ಲಿ ಎರಡು ದಿನ ಅನ್ನದಾನ ಮಾಡು ತ್ತಿದ್ದು, ಇಂದು ನವ್ಯಶ್ರೀ ಅನ್ನದಾನ -೧೦೦ರ ಸಂಭ್ರಮ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ಅನ್ನವನ್ನು ಯಾರೂ ಕೂಡ ಚಲ್ಲಿಬಾರದು. ಪ್ರಪಂಚದಲ್ಲಿ ಏಳುಬಿಲಿಯನ್ ಜನರಿದ್ದು, ೬೪ ಕೋಟಿ ಜನ ಹಸಿವಿನಿಂದ ಬಳಲುತ್ತಿ zರೆ. ನಮ್ಮ ದೇಶದಲ್ಲಿ ಒಂದು ವರ್ಷಕ್ಕೆ ಒಂದು ಕೋಟಿಗೂ ಹೆಚ್ಚು ಸಮಾರಂಭಗಳು ನಡೆಯುತ್ತಿದ್ದು, ಸುಮಾರು ಶೇ.೨೦ರಷ್ಟು ಆಹಾರ ವ್ಯರ್ಥವಾಗುತ್ತಿದೆ. ೭.೮೨ ಕೋಟಿ ಟನ್ ಆಹಾರ ಚಲ್ಲಲಾಗುತ್ತಿದೆ. ಅದರ ಮಲ್ಯ ಅಂದಾಜು ೧ ಲಕ್ಷ ಕೋಟಿ ರೂ. ಆಗುತ್ತದೆ. ನಮ್ಮ ಸರ್ಕಾರದ ಬಜೆಟ್‌ನ ೨೫ರಷ್ಟು ಆಹಾರ ಪೋಲಾಗುತ್ತಿದ್ದು, ಇದನ್ನು ಉಳಿಸಿದಲ್ಲಿ ಪ್ರತಿನಿತ್ಯ ೨೬ ಕೋಟಿ ಜನರಿಗೆ ಅನ್ನದಾನ ಮಾಡಬಹು ದಾಗಿದೆ. ಜೀವನದಲ್ಲಿ ಬೇಕು ಬೇಕು ಎನ್ನುವವರೇ ಬಹಳಮಂದಿ ಇzರೆ. ಬೇಡ ಬೇಡ ಎನ್ನುವವರು ನಮಗೆ ಬೇಕಾಗಿzರೆ. ಭಗವಂತನ ಅಕೌಂಟ್‌ನಲ್ಲಿ ನೀವು ಎಷ್ಟು ಸತ್ಕಾರ್‍ಯದ ಫಲಗಳನ್ನು ಠೇವಣಿ ಇಟ್ಟಿದ್ದೀರಿ ಎಂಬುದು ಮುಖ್ಯ ವಾಗುತ್ತದೆ. ಹಸಿದವರಿಗೆ ಅನ್ನ ಕೊಡುವುದರಲ್ಲಿ ಸಿಗುವ ಆತ್ಮತೃಪ್ತಿ ಬೇರೆ ಎಲ್ಲಿಯೂ ಸಿಗುವುದಿಲ್ಲ ಎಂದರು.
ಮೆಗ್ಗಾನ್ ಆವರಣದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ನಿರಂತರವಾಗಿ ನಡೆಯಲು ಮತ್ತು ರೋಗಿಗಳ ಸಂಬಂಧಿಕರಿಗೆ ಉಳಿದು ಕೊಳ್ಳಲು ಶೌಚಾಲಯ ಹಾಗೂ ಶಾಶ್ವತ ವಿಶ್ರಾಂತಿ ಹಾಲ್ ನಿರ್ಮಾಣಕ್ಕೆ ಎ ಜನಪ್ರತಿನಿಧಿಗಳ ಒತ್ತಡದಿಂದಾಗಿ ೫ ಕೋಟಿ ರೂ. ಅನುದಾನ ಸರ್ಕಾರದಿಂದ ಮಂಜೂರಾಗಿದ್ದು, ೨ ಕೋಟಿ ರೂ. ಬಿಡುಗಡೆಯಾಗಿದೆ. ನವ್ಯಶ್ರೀ ಸಂಸ್ಥೆ ಹಸಿರು ಮತ್ತು ಹಸಿವು ಎರಡೂ ಸಿದ್ಧಾಂತಗಳೊಂದಿಗೆ ಕಾರ್ಯಾ ಚರಿಸುತ್ತಿರುವುದು ಶ್ಲಾಘನೀಯ ಎಂದರು.
ಯೋಗ ಗುರು ರುದ್ರಾರಾಧ್ಯ ಮಾತನಾಡಿ, ವಿದ್ಯಾದಾನಕ್ಕಿಂತ ಅನ್ನದಾನವೇ ಶ್ರೇಷ್ಠ. ಶರೀರಕ್ಕೆ ಅನ್ನ ಸಿಕ್ಕಿದಾಗ ಮಾತ್ರ ಶಕ್ತಿ ಬರುತ್ತದೆ. ಶಕ್ತಿ ಇzಗ ಮಾತ್ರ eನ ಪಡೆಯಲು ಸಾಧ್ಯ. ನಿವೃತ್ತ ಎಸ್ಪಿ ನಾಗರಾಜ್ ಅವರು ೯೩ನೇ ಇಸವಿಯಲ್ಲಿ ನಮಗೆಲ್ಲರಿಗೂ ಪೊಲೀಸ್ ಕೆಲಸ ನೀಡಿದ್ದಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ಸಲುವಾಗಿ ನಿವೃತ್ತ ಪೊಲೀಸ್ ಅಧಿಕಾರಿಗಳೆಲ್ಲರೂ ಸೇರಿ ಇಂದಿನ ಅನ್ನದಾನದ ವ್ಯವಸ್ಥೆ ಮಾಡಿzರೆ. ನಿರಂತರವಾಗಿ ಅವರು ಕೈಜೋಡಿಸುತ್ತಿzರೆ. ಹಿರಿಯ ಅಧಿಕಾರಿಯೊಬ್ಬರ ಉಪಕಾರ ಸ್ಮರಣೆಗಾಗಿ ಈ ಕಾರ್ಯ ಹಮ್ಮಿಕೊಂಡಿzರೆ. ಇದು ಎಲ್ಲರಿಗೂ ಮಾದರಿಯಾಗಲಿ ಎಂದರು.
ಪ್ರಮುಖರಾದ ಕೆ.ಪಿ. ಶೆಟ್ಟಿ, ನವ್ಯಶ್ರೀ ನಾಗೇಶ್, ಶ್ರೀಕಾಂತ್, ಶರಣ್ಯ ಮಂಜುನಾಥ್, ವಿಜಯಕುಮಾರ್, ರಂಗನಾಥ್, ನಾಗರಾಜ್ ಶೆಟ್ಟರ್, ಸಂತೋಷ್ ಎಲಿಗಾರ್ ಇನ್ನಿತರರಿದ್ದರು.