ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳನ್ನು ತುರ್ತಾಗಿ ಅಳವಡಿಸಿ : ಡಿಸಿ ಸೂಚನೆ

Share Below Link

ಶಿವಮೊಗ್ಗ : ಸೊರಬ ತಾಲೂಕಿನ ಹಲವು ಗ್ರಾಮಗಳಲ್ಲಿ ಟ್ರಾನ್ಸ್‌ಫಾರ್ಮರ್ ಗಳು ಹಾಳಾಗಿದ್ದು ಸಕಾಲದಲ್ಲಿ ಸಕಾಲಕ್ಕೆ ವಿದ್ಯುತ್ ಸರಬರಾಜಗದೇ ರೈತರು ಸಂಕಷ್ಟಕ್ಕೀಡಾಗುವಂತಾಗಿದೆ. ಬೆಸ್ಕಾಂನ ಸಂಬಂಧಿತ ಅಧಿಕಾರಿಗಳು ಕೂಡಲೇ ಬದಲೀ ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಾಪಿಸುವಂತೆ ಜಿಧಿಕಾರಿ ಡಾ| ಸೆಲ್ವಮಣಿ ಅವರು ಹೇಳಿದರು.
ಸೊರಬ ತಾಲೂಕಿನ ಬಯಲು ರಂಗಮಂದಿರದಲ್ಲಿ ಏರ್ಪಡಿಸಿದ್ದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರ ಕೃಷಿ ಚಟುವಟಕೆಗಳಿಗೆ ಸಕಾಲದಲ್ಲಿ ವಿದ್ಯುತ್ ಸರಬರಾಜಗದಿರುವ, ಟ್ರಾನ್ಸ್‌ಫಾರ್ಮರ್ ಗಳನ್ನು ದುರಸ್ತಿ ಮಾಡದಿರುವ ಬಗ್ಗೆ ಹಾಗೂ ಇಲಾಖೆಯ ಸೇವೆಗಳನ್ನು ಒದಗಿಸಲು ಹಣಕ್ಕಾಗಿ ಬೇಡಿಕೆ ಇಡುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಗಂಭೀರ ಸ್ವರೂಪದ ಆರೋಪಗಳು ಕೇಳಿಬಂದಿವೆ. ಸಾರ್ವಜನಿಕ ಸೇವೆ ಒದಗಿಸುವಲ್ಲಿ ಮೆಸ್ಕಾಂ ಅಧಿಕಾರಿಗಳು ಇನ್ನಾದರೂ ತಮ್ಮ ಜವಾಬ್ದಾರಿಯರಿತು ಕಾರ್ಯನಿರ್ವಹಿಸು ವಂತೆ ಹಾಗೂ ಬೆಟ್ಟದಕೂರ್ಲಿ ಗ್ರಾಮ ಸೇರಿದಂತೆ ಬಹುದಿನಗಳಿಂದ ದುರಸ್ತಿ ಯಾಗದೇ ಉಳಿದಿರುವ ೧೪ಟಿ.ಸಿ.ಗಳನ್ನು ಕೂಡಲೇ ದುರಸ್ತಿಗೊಳಿಸಿ, ತ್ರಿ ಫೇಸ್ ವಿದ್ಯುತ್ ನೀಡುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.


ತಹಶೀಲ್ದಾರರು ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿ ಗಳನ್ನು ತ್ವರಿತ ವಿಲೇ ಮಾಡುವಂತೆ ಸೂಚಿಸಿದ ಅವರು, ಅಗತ್ಯವಿ ದ್ದಲ್ಲಿ ಖುದ್ದು ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.
ಸಾಗರದ ಉಪವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ಬಾಕಿ ಇರುವ ೮೦೦ಕ್ಕೂ ಹೆಚ್ಚಿನ ಟ್ರಿಬ್ಯುನಲ್ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇಗೊಳಿಸಬೇಕು ಎಂದು ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸೊರಬದ ತಹಶೀಲ್ದಾರರು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಬಾಕಿ ಇರುವ ಇನಾಂ ಅರ್ಜಿಗಳ ಮಾಹಿತಿಯನ್ನು ಈ ಕೂಡಲೇ ನೀಡುವಂತೆ ಸೂಚಿಸಿದರು.
ಗ್ರಾಪಂ ವ್ಯಾಪ್ತಿಗೆ ಸಂಬಂಧಿಸಿದಂತೆ ಬಂದಿರುವ ಗ್ರಾಮೀಣರ ಅಹವಾಲುಗಳನ್ನು ಸ್ಥಳೀಯ ವಾಗಿಯೇ ಇತ್ಯರ್ಥಗೊಳಿಸಬೇಕು. ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಕೂಡಲೇ ಗಮನಹರಿಸುವಂತೆ ಸೂಚಿಸಿದರು.
ಆಧುನಿಕ ಯುಗದಲ್ಲೂ ಅದರಲ್ಲೂ ಗ್ರಾಮೀಣ ಮಟ್ಟದಲ್ಲಿ ಸಾಮಾಜಿಕ ಬಹಿಷ್ಕಾರದಂತಹ ಪ್ರಕರಣಗಳು ಕೇಳಿ ಬರುತ್ತಿರುವುದು ನಾಗರೀಕ ಸಮಾಜದ ಲಕ್ಷಣವಲ್ಲ. ತಹಶೀಲ್ದಾರರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿ, ಸಮಸ್ಯೆಯನ್ನು ಸೌಹಾರ್ಧಯುತವಾಗಿ ಇತ್ಯರ್ಥ್ಯ ಗೊಳಿಸಬೇಕು. ಈ ಘಟನೆಗಳು ಪುನರಾವರ್ತನೆಯಾಗದಂತೆ ಗಮನಿಸಬೇಕು. ಪದೇಪದೇ ಪ್ರಕರಣಗಳು ಗೋಚರಿಸಿದಲ್ಲಿ ಸಂಬಂಧಿಸಿದ ವ್ಯಕ್ತಿ ಅಥವಾ ಗುಂಪುಗಳ ಮೇಲೆ ನಿಯಮಾನು ಸಾರ ಮೊಕದ್ದಮೆ ದಾಖಲಿಸುವಂತೆ ಅವರು ಸೂಚಿಸಿದರು.
ಜನತಾ ದರ್ಶನ ಆರಂಭಕ್ಕೂ ಮುನ್ನ ಅಪರ ಜಿಧಿಕಾರಿ ಸಿದ್ಧಲಿಂಗರೆಡ್ಡಿ ಅವರು ಮಾತನಾಡಿ, ಅರ್ಜಿದಾರರು ತಮ್ಮ ಅರ್ಜಿಗಳ ಮೇಲೆ ಮೊಬೈಲ್ ನಂಬರನ್ನು ನಮೂದಿಸಿ. ಇದರಿಂದಾಗಿ ತಮ್ಮ ಅರ್ಜಿಯನ್ನು ಆನ್‌ಲೈನ್‌ನಲ್ಲಿ ದಾಖಲಿಸಿ, ಅರ್ಜಿಯ ಬಗ್ಗೆ ಕೈಗೊಳ್ಳಲಾದ ಕ್ರಮದ ಬಗ್ಗೆ ತಮಗೆ ಮಾಹಿತಿ ನೀಡಲಾಗುವುದು. ಹಿರಿಯ ನಾಗರೀಕರು, ಮಹಿಳೆಯರು, ಸಾರ್ವಜನಿಕರ ವೈಯಕ್ತಿಕ ಹಾಗೂ ಗುಂಪುಗಳಿಂದ ಅರ್ಜಿಗಳನ್ನು ನಿಯಮಾನುಸಾರ ಪಡೆದುಕೊಳ್ಳಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಜಿಪಂ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ, ಉಪವಿಭಾಗಾಧಿಕಾರಿ ಕು.ಪಲ್ಲವಿ ಸಾತೇನಹಳ್ಳಿ, ಶಿಕಾರಿಪುರ ಡಿವೈಎಸ್ಪಿ. ಶಿವಾನಂದ್, ತಹಶೀಲ್ದಾರ್ ಹುಸೇನ್ ಸರ್ಕಾರ್, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ದೀಪಕ್ ಸೇರಿದಂತೆ ಜಿಯ ವಿವಿಧ ಇಲಾಖೆಗಳ ಜಿ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.