ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ವಿಜಯೇಂದ್ರ ಬಿಜೆಪಿ ರಾಜಧ್ಯಕ್ಷರಾಗಿ ಮೊದಲ ಬಾರಿಗೆ ಶಿವಮೊಗ್ಗ ಭೇಟಿ…

Share Below Link

ಶಿವಮೊಗ್ಗ : ಬಿಜೆಪಿ ರಾಜಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ನ.೨೯ರ ನಾಲೆ ಶಿವಮೊಗ್ಗ ನಗರಕ್ಕೆ ಬಿ.ವೈ. ವಿಜಯೇಂದ್ರ ಅವರು ಆಗಮಿಸಲಿದ್ದು ನಗರದಲ್ಲಿ ಹಬ್ಬದ ವಾತವರಣ ಉಂಟಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಅವರು ಸುದ್ದಿಗಷ್ಟಿಯಲ್ಲಿ ಹೇಳಿದರು.


ನಾಳೆ ಬೆಳಿಗ್ಗೆ ೧೦.೩೦ಕ್ಕೆ ತೆರೆದ ವಾಹನದ ಜೊತೆಗೆ ಸುಮಾರು ಎರಡು ಸಾವಿರ ಬೈಕ್ ರ್‍ಯಾಲಿ ಮೂಲಕ ಬೆಕ್ಕಿನ ಕಲ್ಮಠದಿಂದ ಅಮ್ಮಿರ್‌ಹಮ್ಮದ್ ವೃತ್ತ, ಗೋಪಿ ವೃತ್ತ, ಜೈಲ್ ಸರ್ಕಲ್, ಲಕ್ಷ್ಮೀ ಟಾಕೀಸ್ ವೃತ್ತ, ಪಿಇಎಸ್ ಕಾಲೇಜಿನ ಪ್ರೇರಣಾ ಸಭಾಂಗಣದವರೆಗೆ ಅಪಾರ ಅಭಿಮಾನಿಗಳು ಮತ್ತು ಕಾರ್ಯಕರ್ತ ರೊಂದಿಗೆ ಮೆರವಣಿಗೆಯಲ್ಲಿ ತೆರಳಲಿದ್ದು, ಪ್ರೇರಣ ಸಭಾಂಗಣದಲ್ಲಿ ಬೃಹತ್ ಅಭಿನಂದನಾ ಸಮಾರಂಭ ವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸುಮಾರು ೬ ರಿಂದ ೭ ಸಾವಿರ ಜನ ಸೇರುವ ನಿರೀಕ್ಷೆ ಇದೆ. ಹಿರಿಯ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಶಾಸಕರಾದ ಅರಗ ಜನೇಂದ್ರ, ಚನ್ನಬಸಪ್ಪ, ಡಿ.ಎಸ್. ಅರುಣ್, ಎಸ್. ರುದ್ರೇಗೌಡ, ಮಾಜಿ ಶಾಸಕರಾದ ಅಶೋಕ್ ನಾಯಕ್, ಹರತಾಳು ಹಾಲಪ್ಪ, ಸ್ವಾಮಿರಾವ್ ಸೇರಿದಂತೆ ಜಿಲ್ಲಾ ಬಿಜೆಪಿಯ ಪದಾಧಿಕಾರಿಗಳು, ಗಣ್ಯರು, ಕಾರ್‍ಯಕರ್ತರು, ಭಾಗವಹಿಸಲಿದ್ದಾರೆ ಎಂದರು.
ಅಭಿಮಾನದ ಅಭಿನಂದನೆ ಕಾರ್ಯಕ್ರಮದ ನಂತರ ನೂತನ ಅಧ್ಯಕ್ಷರು ಜಿಲ್ಲೆಯ ಹಿರಿಯರ ಮನೆಗೆ ಭೇಟಿ ನೀಡಿ, ಆಶೀರ್ವಾದ ಪಡೆಯಲಿ ದ್ದಾರೆ. ಇಡೀ ಜಿಲ್ಲೆಯಲ್ಲಿ ಸಂಭ್ರಮ ಸಡಗರದ ವಾತಾವರಣ ನಿರ್ಮಾಣ ವಾಗಿದೆ. ನಗರವನ್ನು ನವವಧುವಿನಂತೆ ಸಿಂಗರಿಸಲಾಗಿದೆ. ಶಿವಮೊಗ್ಗ ಜಿಲ್ಲೆಗೆ ರಾಜಧ್ಯಕ್ಷ ಸ್ಥಾನ ಸಿಕ್ಕಿದ್ದು, ಎಲ್ಲರಿಗೂ ಪ್ರೇರಣೆ ನೀಡಿದೆ ಎಂದರು.
ವಿಶೇಷವಾಗಿ ಬಿಜೆಪಿ ಕಛೇರಿಗೆ ಭೇಟಿ ನೀಡಿ ಸಮಾಲೋಚನೆ ಜೊತೆಗೆ ಬೂತ್ ಅಧ್ಯಕ್ಷರ ಮನೆಗೆ ಭೇಟಿ ನೀಡಲಿದ್ದಾರೆ. ಸಂಘಟನೆಯ ಕೆಳಸ್ತರದ ಪದಾಧಿಕಾರಿಗಳ ಜೊತೆಗೂ ಚರ್ಚಿಸಲಿದ್ದಾರೆ ಎಂದರು.
ನ.೩೦ರಂದು ಶಿಕಾರಿಪುರದಲ್ಲಿ ೨೦ ಸಾವಿರ ಜನರ ಬಹಿರಂಗ ಸಭೆ ಏರ್ಪಡಿಸಲಾಗಿದೆ. ಅಲ್ಲಿ ನೂತನ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ವಿಜೇಂದ್ರರವರಿಗೆ ಜಿಲ್ಲೆಯ ಪರವಾಗಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದರು.
ಶಿಕಾರಿಪುರದ ಹಳೆ ಸಂತಕಟ್ಟೆ ಮೈದಾನದಲ್ಲಿ ಬಹಿರಂಗ ಸಭೆ ಏರ್ಪಡಿಸಿದ್ದು, ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಯಲ್ಲಿ ಸಭೆಯ ಸ್ಥಳವನ್ನು ತಲುಪಲಿದ್ದಾರೆ ಎಂದರು.
ಸಾರ್ವಜನಿಕರು ಪಕ್ಷದ ಅಭಿಮಾನಿಗಳು, ಕಾರ್ಯಕರ್ತರು ಭಾಗವಹಿಸುವಂತೆ ವಿನಂತಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್. ಅರುಣ್, ಎಸ್. ರುದ್ರೇಗೌಡ ಪ್ರಮುಖರಾದ ಕೆ.ಬಿ. ಅಶೋಕ್ ನಾಯಕ್, ಎಸ್. ದತ್ತಾತ್ರಿ, ಶಿವರಾಜ್, ಶ್ರೀನಾಥ್, ರತ್ನಾಕರ್ ಶೆಣೈ, ಅಣ್ಣಪ್ಪ ಮತ್ತಿತರರು ಇದ್ದರು.