ಪೊಳ್ಳು ಹಿಂದುತ್ವವಾದಿಗಳಿಂದ ನಮಗೆ ಪಾಠ ಬೇಕಿಲ್ಲ: ಈಶ್ವರಪ್ಪ ವಿರುದ್ಧ ಗುಡುಗಿದ ಬಿವೈಆರ್
ನಾಗೂರು: ಪಕ್ಷದ ಚೌಕಟ್ಟಿನಲ್ಲಿ ಪಕ್ಷದಅಭ್ಯರ್ಥಿ ಘೋಷಣೆ ಆದ ನಂತರದಲ್ಲಿ ಅದೇ ಅಧಿಕೃತ ವಾಗಲಿದೆ. ಹಿಂದುತ್ವವಾದ ವಿಚಾರದಲ್ಲಿ ನಮ್ಮ ಮೈಯಲ್ಲಿ ಹರಿಯುತ್ತಿರುವ ಒಂದೊಂದು ಹನಿ ರಕ್ತವೂ ಕೂಡ ಹಿಂದುವೇ ಆಗಿದೆ. ದೇಶದಲ್ಲಿರುವ ಎಲ್ಲರೂ ಹಿಂದುಗಳೇ ಆಗಿzರೆ. ಪೊಳ್ಳು ಹಿಂದುತ್ವ ವಾದಿಗಳಿಂದ ನಮಗೆ ಪಾಠ ಬೇಕಾಗಿಲ್ಲ ಎಂದು ಪರೋಕ್ಷವಾಗಿ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪರ ವಿರುದ್ಧ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಗುಡುಗಿದರು.
ಪ್ರಜಪ್ರಭುತ್ವ ವ್ಯವಸ್ಥೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ. ರಾಘವೇಂದ್ರ ಎಂಬುದನ್ನು ಪಕ್ಷವೇ ಅಧಿಕೃತವಾಗಿ ಘೋಷಿಸಿದೆ. ಪ್ರಧಾನಿ ಮೋದಿ ಅವರು ನಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ, ಅವರ ಪಕ್ಕದ ನನ್ನನ್ನು ನಿಲ್ಲಿಸಿಕೊಂಡು ಪ್ರಚಾರವನ್ನು ಮಾಡಿ, ನನ್ನನ್ನು ಹಾರೈಸಿ, ಆಶೀರ್ವಾದ ಮಾಡಿ zರೆ. ಇಡೀ ಬಿಜೆಪಿ, ಪರಿವಾರ ನಮ್ಮ ಜತೆಗೆ ಇದೆ ಎಂದರು.
ಪ್ರಚಾರಕ್ಕಾಗಿ ಹಿಂದುತ್ವ ಪ್ರದರ್ಶಿಸುವವರು ನಾವಲ್ಲ. ದೇಶದಲ್ಲಿರುವ ಎಲ್ಲರೂ ಹಿಂದೂ ವಾದಿಗಳು. ನಾನು ಮಾತವಲ್ಲ, ಬಿ.ಎಸ್. ಯಡಿಯೂರಪ್ಪನವರು ಅಯೋಧ್ಯೆಯ ರಾಮಜನ್ಮಭೂಮಿ ಆಂದೋಲನದ ಕರಸೇವಕರಾಗಿ ತಮ್ಮನ್ನು ತೊಡಗಿಸಿಕೊಂಡು, ಆರೆಸ್ಸೆಸ್ ಪ್ರಚಾರಕರಾಗಿ ಹುಬ್ಬಳ್ಳಿ ಈದ್ಗಾ ಮೈದಾನ ಹೋರಾಟ ಇರಬಹುದು, ಮುರಳಿ ಮನೋಹರ್ ಜೋಶಿಯವರು ಕರೆಕೊಟ್ಟ ಸಂದರ್ಭದಲ್ಲಿ ಕಾಶ್ಮೀರದ ಲಾಲ್‌ಚೌಕ್‌ನಲ್ಲಿ ಉಗ್ರಗಾಮಿಗಳ ದಾಳಿಯ ಮಧ್ಯದಲ್ಲಿ ತ್ರಿವರ್ಣ ಧ್ವಜ ಹಾರಿಸುವ ಹೋರಾಟದಲ್ಲಿ ಭಾಗವಹಿಸಿದ್ದರು. ಹೀಗಾಗಿ ಪ್ರಚಾರಕ್ಕಾಗಿ ಹಿಂದುತ್ವ ಪ್ರದರ್ಶನ ಮಾಡುವ ಅವಶ್ಯಕತೆ ನಮಗಿಲ್ಲ ಎಂದರು.
ಯಡಿಯೂಪ್ಪನವರು ಮುಖ್ಯಮಂತ್ರಿಯಾಗಿzಗ ತಂದಿರುವ ಒಂದೊಂದು ಯೋಜನೆಯನ್ನು ಜನ ಈಗಲೂ ನೆನಪು ಮಾಡಿಕೊಳ್ಳುತ್ತಾರೆ. ಗೋ ಹತ್ಯೆ ನಿಷೇಧಕ್ಕೆ ಬಿಗಿ ಕಾನೂನು ತಂದಿzರೆ. ಭಾಗ್ಯ ಲಕ್ಷ್ಮೀಯೋಜನೆ ಮೂಲಕ ಹೆಣ್ಣು ಭ್ರೂಣ ಹತ್ಯೆಗೆ ಕಡಿವಾಣ ಹಾಕುವ ದೊಡ್ಡ ಪ್ರಯತ್ನ ಮಾಡಿzರೆ. ಕನಕದಾಸ ಜಯಂತಿ, ವಾಲ್ಮೀಕಿ ಜಯಂತಿ ಸೇರಿ ಅನೇಕ ಮಹನೀಯರಜಯಂತಿ, ಎಲ್ಲ ಮಠ ಮಂದಿರಗಳ ಅಭಿವದ್ಧಿ ಕಾರ್ಯಕ್ಕೆ ಆದ್ಯತೆ ನೀಡಿದ್ದರು. ಚುನಾವಣೆಗಾಗಿ ಹಿಂದುತ್ವ ನಮ್ಮದಲ್ಲ. ವೋಟಿಗಾಗಿ ಹಿಂದುತ್ವ ಬಳಸಿಕೊಳ್ಳುವವರಿಂದ ಪಾಠ ಅಗತ್ಯವಿಲ್ಲ ಎಂದು ಹೇಳಿದರು.
ಯಡಿಯೂರಪ್ಪನವರ ಕುಟುಂಬ ಎಲ್ಲ ಸಮಾಜವನ್ನು ಸಮಾನವಾಗಿ ಕಂಡಿದೆ ಮತು ಕಾಣುತ್ತಿದೆ ಎಂದು ಕಳೆದ ಎರಡು ವಾರದ ಕೆಳಗೆ ಈಶ್ವರಪ್ಪನವರು ಶಿಕಾರಿಪುರಕ್ಕೆ ಬಂದಿzಗ ಹೇಳಿದ್ದರು. ಐದು ಲಕ್ಷಕ್ಕೂ ಅಧಿಕ ಅಂತರದಲ್ಲಿ ರಾಘವೇಂದ್ರ ಅವರನ್ನು ಗೆಲ್ಲಿಸಬೇಕು ಎಂದು ಅವರೇ ಹೇಳಿದ್ದರು. ವಿಜಯೇಂದ್ರ ಅವರು ರಾಜಧ್ಯಕ್ಷರಾಗಿ ಒಳ್ಳೆಯ ಕಾರ್ಯ ಮಾಡುತ್ತಿzರೆ ಎಂದು ಅವರೇ ಹಾರೈಸಿದ್ದರು. ಕೇವರ ಎರಡೇ ವಾರದಲ್ಲಿ ಈಶ್ವರಪ್ಪನವರಲ್ಲಿ ಈ ಬದಲಾವಣೆ ಏಕಾಯಿತು? ಇದನ್ನೆಲ್ಲವನ್ನು ಮತದಾರರು ಸೂಕ್ಷ್ಮವಾಗಿ ಗಮನಿಸುತ್ತಿzರೆ ಎಂದರು.