ಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳುಶಿಕ್ಷಣ

ಸಾಂಸ್ಕೃತಿಕ -ಸಾಹಿತ್ಯ ಪರಿಷತ್ತು ಜಿಲ್ಲಾ ಕಾರ್ಯದರ್ಶಿಯಾಗಿ ಲೇಖಕಿ-ಶಿಕ್ಷಕಿ ಅಶ್ವಿನಿ ಅಂಗಡಿ…

Share Below Link

ಬಾಗಲಕೋಟೆ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ತು (ರಿ) ಬಾಗಲಕೋಟೆ ಜಿಲ್ಲಾ ಘಟಕದ ಸಹಕಾರ್ಯದರ್ಶಿಯಾಗಿ ಶಿಕ್ಷಕಿ, ಲೇಖಕಿ ಹಾಗೂ ಸಾಂಸ್ಕೃತಿಕ ಸಂಘಟಕರಾದ ಶ್ರೀಮತಿ ಅಶ್ವಿನಿ ಅಂಗಡಿ ಅವರು ನೇಮಕಗೊಂಡಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ನೂತನ ಸಭಾಭವನದಲ್ಲಿ ನಡೆದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಅವರು ಅಧಿಕೃತವಾಗಿ ಪದಗ್ರಹಣ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಭಾಗವಹಿಸಿ, ಸರ್ಕಾರಿ ನೌಕರರಲ್ಲಿ ಸಾಹಿತ್ಯ, ಕಲೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪರಿಷತ್ತಿನ ಪಾತ್ರ ಮಹತ್ವzಗಿದೆ ಎಂದು ಅಭಿಪ್ರಾಯಪಟ್ಟರು.
ಧಾರವಾಡ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ. ಸಿ. ಮನ್ನಿಕೇರಿ, ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷೆ ಶ್ರೀಮತಿ ರಮಾ ಆರ್. ಹಾಗೂ ಸಂಸ್ಥಾಪಕ ಕಾರ್ಯದರ್ಶಿ ಶ್ರೀಮತಿ ಪರ್ವೀನ್ ಬಾನು ಬಳ್ಳಣ್ಣವರ ಅವರು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಜಿಯ ವಿವಿಧ ಇಲಾಖೆಗಳ ಸರ್ಕಾರಿ ನೌಕರರು, ಸಾಹಿತ್ಯಾಭಿಮಾನಿಗಳು, ಶಿಕ್ಷಕರು ಹಾಗೂ ಗಣ್ಯರು ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.

Leave a Reply

Your email address will not be published. Required fields are marked *