ಅಕ್ರಮ ಮದ್ಯ ಮಾರಾಟ ವಿರೋಧಿಸಿ ಗ್ರಾಮಸ್ಥರ ಪ್ರತಿಭಟನೆ….
ಶಿವಮೊಗ್ಗ: ನಮ್ಮೂರಿನಲ್ಲಿ ಮದ್ಯ ಮಾರಾಟ ಮಾಡಬಾರದು, ಅಕ್ರಮ ಮದ್ಯ ವನ್ನು ದಿನಸಿ ಅಂಗಡಿಯಲ್ಲಿ ಇಟ್ಟು ಮಾರಾಟ ಮಾಡುತ್ತಿರುವ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳ ಬೇಕು ಎಂದು ಆಗ್ರಹಿಸಿ ಹೊಸ ನಗರ ತಾ ಬೆಳ್ಳೂರು ಗ್ರಾಮದ ಮಹಿಳೆಯರು ಮತ್ತು ಗ್ರಾಮಸ್ಥರು ಇಂದು ಜಿಧಿಕಾರಿ ಕಚೇರಿ ಎದರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಬೆಳ್ಳೂರಿನಲ್ಲಿ ನಾವು ಖಾಯಂ ನಿವಾಸಿಗಳಾಗಿದ್ದು, ಕಷಿ ಕೂಲಿ ಕಾರ್ಮಿಕರಾಗಿರುತ್ತೇವೆ. ನಮ್ಮ ಗ್ರಾಮದಲ್ಲಿ ದಿನಸಿ ಅಂಗಡಿಗಳಲ್ಲಿ ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಮಹಿಳೆಯರಿಗೆ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಇದರಿಂದ ಸಾಕಷ್ಟು ತೊಂದರೆಯಾ ಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.
ಈ ಮದ್ಯವನ್ನು ಸೇವಿಸಿ ಸಾಕಷ್ಟು ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿರುತ್ತಾರೆ. ಮದ್ಯ ಸೇವಿ ಸಿದ ವ್ಯಕ್ತಿಗಳು ಬಾಯಿಗೆ ಬಂದಂತೆ ಆಶ್ಲೀಲವಾಗಿ ಮಾತನಾಡುತ್ತಾ ಮಹಿಳೆಯರು ಮತ್ತು ಮಕ್ಕಳಿಗೆ ತೊಂದರೆ ಕೊಡುತ್ತಿರುತ್ತಾರೆ. ಮಹಿ ಳೆಯರು ಮತ್ತು ಮಕ್ಕಳು ರಸ್ತೆಯಲ್ಲಿ ಓಡಾಡುವುದು ಕಷ್ಟವಾಗಿರುತ್ತದೆ ಎಂದು ತಿಳಿಸಿದರು.
ಆದ್ದರಿಂದ ತಕ್ಷಣವೇ ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಕಾನೂನು ಕ್ರಮ ಜರುಗಿಸಿ ಅಕ್ರಮ ಮದ್ಯ ಮಾರಾಟಕ್ಕೆ (೩ನೇ ಪುಟಕ್ಕೆ)